ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.
ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ವಿಮಾನವು ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ತಾಂತ್ರಿಕ ತೊಂದರೆಯಿಂದ ಪತನಗೊಂಡು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ವಿಮಾನದಲ್ಲಿದ್ದ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಐವರು ದುರ್ಮರಣ ಹೊಂದಿದ್ದಾರೆ.
ಅಜಿತ್ ಪವಾರ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದು, ಕಂಬನಿ ಮಿಡಿದಿದ್ದಾರೆ.





