ಹೊಸದಿಲ್ಲಿ : ಮೊಬೈಲ್‌ನಿಂದ ಹಣ ಪಾವತಿ ಮಾಡುವ ಯುಪಿಐ ಸೇವೆಯಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ದೇಶಾದ್ಯಂತ ವ್ಯತ್ಯಯ ಕಂಡು ಬಂದಿದೆ. ಇದರಿಂದ ಡಿಜಿಟಲ್ ಬಳಕೆದಾರರು ವಹಿವಾಟು ನಡೆಸಲು ಪರದಾಡಿದರು.
ಕಳೆದೊಂದು ತಿಂಗಳಲ್ಲಿ ಮೂರನೇ ಬಾರಿಗೆ ಯುಪಿಐ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದ್ದು, ಇದರಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿಯಂತ್ರಣದ ಎನ್‌ಸಿಪಿಐ ನಿರ್ವಹಿಸುವ ತ್ವರಿತ ಪಾವತಿಗೆ ಅಡ್ಡಿಯಾಗಿದೆ.
ಡೌನ್‌ಡೆಕ್ಟರ್ ನೀಡಿದ ಮಾಹಿತಿ ಪ್ರಕಾರ, ಮಧ್ಯಾಹ್ನ ವೇಳೆಗೆ ಯುಪಿಐ ಸಂಬಂಧಿತ ಸಮಸ್ಯೆಗಳು ವರದಿಯಾಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಎನ್‌ಪಿಸಿಐ ದೇಶದ ಹಲವೆಡೆ ಪಾವತಿ ಸಮಸ್ಯೆ ಎದುರಾಗಿದೆ. ಇದನ್ನು ತ್ವರಿತಗತಿಯಲ್ಲಿ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದೆ.
ಬಳಕೆದಾರರ ಆಕ್ರೋಶ
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಳಕೆದಾರರು ಅಸಮಾಧಾನ ವ್ಯಕ್ತಪಡಿಸಿದ್ದು, ಯುಪಿಐ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರಿದ್ದಾರೆ.
ಈ ದಿಢೀರ್ ತೊಂದರೆಯಿಂದ ಯುಪಿಐ ಮೇಲೆ ಪರಿಣಾಮ ಬೀರಿದ್ದು, ಇದಕ್ಕಿಂತ ನಗದು ವಹಿವಾಟೇ ಮೇಲು ಎಂದು ಬರೆದುಕೊಂಡಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…