ದೇಶ- ವಿದೇಶ

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿರುವ ಟಿವಿಕೆ ಗದ್ದುಗೆ ಹಿಡಿಯಲು ಸರ್ಕಸ್ ನಡೆಸುತ್ತಿದೆ. ಇನ್ನೊಂದೆಡೆ, ಬದ್ಧ ಎದುರಾಳಿಗಳಾಗಿರುವ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ವದಂತಿ ಬಗ್ಗೆ ವರದಿಯಾಗಿದೆ.

ಟಿವಿಕೆಗೆ ಕಾಂಗ್ರೆಸ್ ಬೆಂಬಲ ಘೋಷಿಸಿದ ಬೆನ್ನಲ್ಲೇ ಸಾಂಪ್ರದಾಯಿಕ ದ್ರಾವಿಡ ಪಕ್ಷಗಳು ಮೈತ್ರಿಯ ಮಾತುಕತೆ ನಡೆಸಿವೆ ಎಂಬ ವರದಿಗಳು ಬುಧವಾರ ಹೊರಬಂದಿದ್ದವು. ಆದರೆ ಈ ವರದಿಗಳನ್ನು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ತಳ್ಳಿಹಾಕಿದ್ದಾರೆ.

6 ತಿಂಗಳು ಯಾವುದೇ ಸಮಸ್ಯೆ ಮಾಡಲ್ಲ
ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸಲಿರುವ ನಟ ಕಂ ರಾಜಕಾರಣಿ ವಿಜಯ್ ಅವರಿಗೆ ಪಕ್ಷವು ಕನಿಷ್ಠ 6 ತಿಂಗಳ ಕಾಲ ಯಾವುದೇ ಅಡೆತಡೆಗಳನ್ನು ಸೃಷ್ಟಿಸುವುದಿಲ್ಲ ಎಂದು ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ.

ಸದ್ಯಕ್ಕೆ ಡಿಎಂಕೆ ಯಾವುದೇ ರಾಜಕೀಯ ಗೊಂದಲ ಸೃಷ್ಟಿ ಮಾಡಲ್ಲ. ಮುಂದಿನ ದಿನಗಳಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಅಥವಾ ಇನ್ನೊಂದು ಚುನಾವಣೆಯನ್ನು ಡಿಎಂಕೆ ಬಯಸುವುದಿಲ್ಲ. ಆರು ತಿಂಗಳ ಕಾಲ ವಿಜಯ್ ಅವರ ಆಡಳಿತವನ್ನು ಸೂಕ್ಷ್ಮವಾಗಿ ಗಮನಿಸುತ್ತೇವೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

ಎಐಡಿಎಂಕೆ ಆಫರ್ ತಿರಸ್ಕರಿಸಿದ ಡಿಎಂಕೆ
ಸರ್ಕಾರ ರಚನೆ ಸಂಬಂಧ ಡಿಎಂಕೆ ಜೊತೆ ಮೈತ್ರಿಗೆ ಎಐಡಿಎಂಕೆ ಪ್ರಯತ್ನಿಸಿದೆ ಎಂದು ವರದಿಯಾಗಿದೆ. ಮತದಾರರ ತೀರ್ಪಿನಂತೆ ವಿರೋಧ ಪಕ್ಷದಲ್ಲಿರುವುದಾಗಿ ಡಿಎಂಕೆ ತಿಳಿಸಿದೆ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

16 mins ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

20 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

23 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

27 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

36 mins ago