ತಮಿಳುನಾಡು: ಡಿಎಂಕೆ ಹಾಗೂ ಬಿಜೆಪಿ ಪಕ್ಷಗಳು ಮೇಲ್ನೋಟಕ್ಕೆ ವಿರೋಧಿಗಳಂತೆ ನಾಟಕವಾಡುತ್ತಿದ್ದಾರೆ. ಆದರೆ ಈ ಎರಡೂ ಪಕ್ಷಗಳು ಒಳಗೊಳಗೇ ವಿವೇಚನಾ ಒಪ್ಪಂದ ಮಾಡಿಕೊಂಡಿದೆ ಎಂದು ತಮಿಳುನಾಡು ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ಆಕ್ರೋಶ ಹೊರಹಾಕಿದರು.
ಈ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರ ಕರುಣಾನಿಧಿ ಜನ್ಮ ಶತಮಾನೋತ್ಸವ ನೆನಪಿನಲ್ಲಿ ನಾಣ್ಯ ಬಿಡುಗಡೆ ಮಾಡಲು ಯೋಜಿಸಿದೆ ಎಂದು ಸಿಎಂ ಸ್ಟಾಲಿನ್ ಅವರು ಹೇಳಿದ್ದರು. ಆದರೆ ನನಗೆ ಬಂದ ಆಹ್ವಾನ ಪತ್ರಿಕೆಯಲ್ಲಿ ರಾಜ್ಯ ಸರ್ಕಾರದ ಲಾಂಛನವಿತ್ತು. ಇದನ್ನು ಸ್ವತಃ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರೇ ಕಳುಹಿಸಿದ್ದರು. ಇದು ರಾಜ್ಯ ಸರ್ಕಾರದ ಕಾರ್ಯಕ್ರಮ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು ಕಿಡಿಕಾರಿದರು.
ಡಿಎಂಕೆ ಇಂಡಿಯಾ ಮೈತ್ರಿಕೂಟದ ಸದಸ್ಯರಾಗಿದ್ದರೂ ಸಹಾ ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಿರಲಿಲ್ಲ. ತಮ್ಮ ಭ್ರಷ್ಟ ಸರ್ಕಾರವನ್ನು ರಕ್ಷಿಸಿಕೊಳ್ಳಲು ಕೇಂದ್ರ ಸರ್ಕಾರದ ನೆರವು ಕೇಳಲು ಪ್ರಯತ್ನಿಸುತ್ತಿದೆ. ಕಳೆದ ವಾರದ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಎಲ್. ಮುರುಗನ್, ಕೆ. ಅಣ್ಣಾಮಲೈ ಅವರು ಭಾಗಿಯಾಗಿದ್ದರು ಎಂದೂ ಮಾಹಿತಿ ನೀಡಿದರು.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…