Mysore
27
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ

ಕೋಲ್ಕತ್ತಾ: ಇಲ್ಲಿನ ಆರ್‌ಜಿಕರ್‌ ವೈದ್ಯಕೀಯ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ ಹಾಗೂ 50,000 ರೂ ದಂಡ ವಿಧಿಸಿ ಕೋಲ್ಕತ್ತಾ ಕೋರ್ಟ್‌ ತೀರ್ಪು ಪ್ರಕಟಿಸಿದೆ.

ಶನಿವಾರ ಕೋಲ್ಕತ್ತಾ ಸೆಷನ್‌ ಕೋರ್ಟ್‌ನ ನ್ಯಾಯಾಧೀಶ ಅನಿರ್ಬನ್‌ ದಾಸ್‌ ಅವರಿದ್ದ ಏಕಸದಸ್ಯ ಪೀಠ ಸಂಜಯ್‌ ರಾಯ್‌ನನ್ನು ದೋಷಿ ಎಂದು ತೀರ್ಪು ಪ್ರಕಟಿಸಿ ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು.

ಈ ಹಿನ್ನೆಲೆಯಲ್ಲಿ ಇಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ವಿಚಾರಣೆ ನಡೆಸಿದ 57 ದಿನಗಳಲ್ಲಿ ಕೋರ್ಟ್‌ ತೀರ್ಪು ಪ್ರಕಟಿಸಿರುವುದು ವಿಶೇಷವೆನಿಸಿದೆ.

ಇದೇ ವೇಳೆ ಸಂತ್ರಸ್ತೆ ಕುಟುಂಬಕ್ಕೆ 17 ಲಕ್ಷ ರೂ ಪರಿಹಾರ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿತು. ಆದ್ರೆ ಸಂತ್ರಸ್ತೆ ಪೋಷಕರು ತಮಗೆ ಪರಿಹಾರ ಬೇಡವೆಂದಿದ್ದರು. ಈ ವೇಳೆ ಕೋರ್ಟ್‌ ಕಾನೂನು ಪ್ರಕಾರವೇ ಪರಿಹಾರ ನೀಡಲು ಆದೇಶ ನೀಡಲಾಗಿದೆ. ಹಣವನ್ನು ಹೇಗೆ ಬೇಕಾದರೂ ಬಳಸಿಕೊಳ್ಳಲು ಸಂತ್ರಸ್ತೆ ಪೋಷಕರು ಅರ್ಹರಿರುತ್ತಾರೆ ಎಂದು ಹೇಳಿದೆ.

2024ರ ಆಗಸ್ಟ್.‌9ರಂದು ಬೆಳಿಗ್ಗೆ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್‌ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್‌ ಸಿಬಿಐಗೆ ಒಪ್ಪಿಸಿತ್ತು.

 

Tags:
error: Content is protected !!