ಕೋಲ್ಕತ್ತಾ: ಇಲ್ಲಿನ ಆರ್‌ಜಿಕರ್ ವೈದ್ಯಕೀಯ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ಹಾಗೂ 50,000 ರೂ ದಂಡ ವಿಧಿಸಿ ಕೋಲ್ಕತ್ತಾ ಕೋರ್ಟ್ ತೀರ್ಪು ಪ್ರಕಟಿಸಿದೆ.
ಶನಿವಾರ ಕೋಲ್ಕತ್ತಾ ಸೆಷನ್ ಕೋರ್ಟ್‌ನ ನ್ಯಾಯಾಧೀಶ ಅನಿರ್ಬನ್ ದಾಸ್ ಅವರಿದ್ದ ಏಕಸದಸ್ಯ ಪೀಠ ಸಂಜಯ್ ರಾಯ್‌ನನ್ನು ದೋಷಿ ಎಂದು ತೀರ್ಪು ಪ್ರಕಟಿಸಿ ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು.
ಈ ಹಿನ್ನೆಲೆಯಲ್ಲಿ ಇಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ವಿಚಾರಣೆ ನಡೆಸಿದ 57 ದಿನಗಳಲ್ಲಿ ಕೋರ್ಟ್ ತೀರ್ಪು ಪ್ರಕಟಿಸಿರುವುದು ವಿಶೇಷವೆನಿಸಿದೆ.
ಇದೇ ವೇಳೆ ಸಂತ್ರಸ್ತೆ ಕುಟುಂಬಕ್ಕೆ 17 ಲಕ್ಷ ರೂ ಪರಿಹಾರ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿತು. ಆದ್ರೆ ಸಂತ್ರಸ್ತೆ ಪೋಷಕರು ತಮಗೆ ಪರಿಹಾರ ಬೇಡವೆಂದಿದ್ದರು. ಈ ವೇಳೆ ಕೋರ್ಟ್ ಕಾನೂನು ಪ್ರಕಾರವೇ ಪರಿಹಾರ ನೀಡಲು ಆದೇಶ ನೀಡಲಾಗಿದೆ. ಹಣವನ್ನು ಹೇಗೆ ಬೇಕಾದರೂ ಬಳಸಿಕೊಳ್ಳಲು ಸಂತ್ರಸ್ತೆ ಪೋಷಕರು ಅರ್ಹರಿರುತ್ತಾರೆ ಎಂದು ಹೇಳಿದೆ.
2024ರ ಆಗಸ್ಟ್.9ರಂದು ಬೆಳಿಗ್ಗೆ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ಒಪ್ಪಿಸಿತ್ತು.
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…
ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…