ರಾಂಚಿ : ಜಾರ್ಖಂಡ್‌ನ ಆಸ್ಪತ್ರೆಯೊಂದರಲ್ಲಿ ರಕ್ತ ಪಡೆದ ಐವರು ಮಕ್ಕಳು ವೈದ್ಯರ ನಿರ್ಲಕ್ಷ್ಯಕ್ಕೆ ಎಚ್‌ಐವಿಗೆ ತುತ್ತಾಗಿರುವ ಆಘಾತಕಾರಿ ಘಟನೆ ನಡೆದಿದೆ.
ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಚೈಬಾಸಾದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆ ಮಾಡಿದ ನಂತರ ಏಳು ವರ್ಷದ ಥಲಸ್ಸೆಮಿಯಾ ರೋಗಿ ಸೇರಿದಂತೆ ಕನಿಷ್ಠ ಐದು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಇರುವುದು ಪತ್ತೆಯಾಗಿದೆ.
ಈ ಘಟನೆಯು ರಾಜ್ಯದ ಆರೋಗ್ಯ ಇಲಾಖೆಯಾದ್ಯಂತ ಆಕ್ರೋಶ ಮತ್ತು ಭೀತಿಯನ್ನು ಹುಟ್ಟುಹಾಕಿದ್ದು, ರಾಂಚಿಯ ಉನ್ನತ ಮಟ್ಟದ ವೈದ್ಯಕೀಯ ತಂಡವು ತಕ್ಷಣದ ತನಿಖೆಗೆ ಆದೇಶಿಸಿದೆ.
ಥಲಸ್ಸೆಮಿಯಾ ಪೀಡಿತ ಮಗುವಿನ ಕುಟುಂಬವು ಚೈಬಾಸಾ ಸದರ್ ಆಸ್ಪತ್ರೆಯ ರಕ್ತ ನಿಽಯಲ್ಲಿ ಎಚ್‌ಐವಿ ಸೋಂಕಿತ ರಕ್ತವನ್ನು ಮಗುವಿಗೆ ನೀಡಲಾಗಿತ್ತು .ಮೊದಲನೆಯದಾಗಿ ಈ ಘಟನೆ ಬೆಳಕಿಗೆ ಬಂದಿತ್ತು. ಈ ಮಕ್ಕಳು ಥಲಸ್ಸೆಮಿಯಾ ರೋಗ ಪೀಡಿತರಾಗಿದ್ದರು. ಮಕ್ಕಳಿಗೆ ಚೈಬಾಸಾದಲ್ಲಿರುವ ಸ್ಥಳೀಯ ರಕ್ತ ನಿಧಿಯಿಂದ ಎಚ್‌ಐವಿ ಸೋಂಕಿತರ ರಕ್ತ ನೀಡಲಾಗಿದೆ ಎಂದು ಏಳು ವರ್ಷದ ಮಗುವಿನ ಕುಟುಂಬ ಆರೋಪಿಸಿದೆ. ರಾಂಚಿಯ ಐದು ಸದಸ್ಯರ ವೈದ್ಯಕೀಯ ತಂಡವು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದೆ. ಮಕ್ಕಳಿಗೆ ಸೋಂಕಿತ ರಕ್ತ ಹೇಗೆ ದೊರೆತಿದೆ ಎಂಬುದನ್ನು ಕಂಡುಹಿಡಿಯಲು ಜಾರ್ಖಂಡ್ ಸರ್ಕಾರ ವೈದ್ಯಕೀಯ ತಂಡವನ್ನು ರಚಿಸಿದೆ.
ಇದನ್ನು ಓದಿ: ಶ್ರೀರಂಗಪಟ್ಟಣ | ಎಚ್‌ಐವಿ,ಏಡ್ಸ್ ಜಾಗೃತಿಗೆ ರೆಡ್ ರನ್ ಮ್ಯಾರಥಾನ್
ತಂಡದ ತಪಾಸಣೆಯ ಸಮಯದಲ್ಲಿ, ಥಲಸ್ಸೆಮಿಯಾದಿಂದ ಬಳಲುತ್ತಿರುವ ಬಾಲಕನ ಜತೆ ಇನ್ನೂ ನಾಲ್ಕು ಮಕ್ಕಳು ಎಚ್‌ಐವಿ-ಪಾಸಿಟಿವ್ ಎಂದು ಕಂಡುಬಂದಿದ್ದು, ಒಟ್ಟು ಪೀಡಿತ ಅಪ್ರಾಪ್ತ ಮಕ್ಕಳ ಸಂಖ್ಯೆ ಐದಕ್ಕೆ ಏರಿದೆ. ಎಲ್ಲಾ ಮಕ್ಕಳು ಒಂದೇ ಆಸ್ಪತ್ರೆಯಲ್ಲಿ ರಕ್ತ ಪಡೆದಿದ್ದರು. ಈ ಘಟನೆ ವ್ಯಾಪಕ ಆತಂಕವನ್ನುಂಟುಮಾಡಿದೆ.
ಆರಂಭಿಕ ತನಿಖೆಯಲ್ಲಿ ಥಲಸ್ಸೆಮಿಯಾ ರೋಗಿಗೆ ಕಲುಷಿತ ರಕ್ತವನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ತನಿಖೆಯ ಸಮಯದಲ್ಲಿ ರಕ್ತ ಬ್ಯಾಂಕಿನಲ್ಲಿ ಕೆಲವು ವ್ಯತ್ಯಾಸಗಳು ಪತ್ತೆಯಾಗಿದ್ದು, ಅವುಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಡಾ. ದಿನೇಶ್ ಕುಮಾರ್ ತಿಳಿಸಿದ್ದಾರೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…