ದೇಶ- ವಿದೇಶ

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಅಮೆರಿಕದ ಅಲ್ಲಿನ ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದರೂ ಕೂಡ ಅಮೆರಿಕದ ವ್ಯಾಪಾರ ಪಾಲುದಾರ ದೇಶಗಳ ಮೇಲೆ ಶೇ.10ರಷ್ಟು ಹೊಸ ಜಾಗತಿಕ ಶುಲ್ಕವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇದನ್ನು ಅವರ ಸರ್ಕಾರದ ಆರ್ಥಿಕ ನೀತಿಯಲ್ಲಿ ಜಾರಿಗೆ ತಂದಲ್ಲಿ ಸುಂಕ ಹೇರಿಕೆಗೆ ಬಳಸುವ ಇತರೆ ಮಾರ್ಗಗಳನ್ನು ಉಪಯೋಗಿಸುವುದಾಗಿ ಹೇಳಿಕೊಂಡಿದ್ದಾರೆ. ಈ ನೀತಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿತ್ತು.

ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು, ಜಾಗತಿಕ ಮಟ್ಟದಲ್ಲಿ ದೇಶಗಳೊಂದಿಗೆ ವ್ಯಾಪಾರ ನಿಯಂತ್ರಿಸುವ ಮತ್ತು ಶುಲ್ಕ ವಿಧಿಸುವ ಕ್ರಮಗಳನ್ನು ಹೊಂದಿದೆ. ತಮ್ಮ ಸರ್ಕಾರ ಮಾಡಿಕೊಂಡ ಬಹುತೇಕ ಒಪ್ಪಂದಗಳು ಇನ್ನೂ ಪರಿಣಾಮಕಾರಿಯಾಗಿವೆ ಎಂದು ಹೇಳಿ ವಿಶೇಷವಾಗಿ ಭಾರತವನ್ನು ಉಲ್ಲೇಖಿಸಿದ್ದರು. ಭಾರತ ಜೊತೆಗೆ ಒಪ್ಪಂದ ಮುಂದುವರಿಸುತ್ತೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರವಾಗಿ ಟ್ರಂಪ್ ಹೇಳಿದರು.

ಎಲ್ಲ ಒಪ್ಪಂದಗಳು ನಾವು ಅದನ್ನು ಬೇರೆ ರೀತಿಯಲ್ಲಿ ಮಾಡಲಿದ್ದೇವೆ. ತಮ್ಮ ಸುಂಕ ಹೇರಿಕೆಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಿಬ್ಬರನ್ನೂ ನಾಮನಿರ್ದೇಶಿಸಿದ ಟ್ರಂಪ್, ನ್ಯಾಯಾಲಯವು ವಿದೇಶಿ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ ಎಂದು ಆರೋಪಿಸಿದರು.

ನ್ಯಾಯಾಲಯವು ವಿದೇಶಿ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ ಎಂಬುದು ನನ್ನ ಅಭಿಪ್ರಾಯ ಎಂದು ಟ್ರಂಪ್ ಪತ್ರಕರ್ತರಿಗೆ ಹೇಳಿದರು.

ಸರ್ವೋಚ್ಚ ನ್ಯಾಯಾಲಯ ತೀರ್ಪನ್ನು ನಿರಾಶಾದಾಯಕ ಎಂದು ಕರೆದ ಅವರು ಕನ್ಸರ್ವೇಟಿವ್ ಪ್ರಭಾವಿತ ನ್ಯಾಯಾಲಯದ ಕೆಲ ಸದಸ್ಯರು ಅವರ ವಿರುದ್ಧ ತೀರ್ಪು ನೀಡಿರುವುದಕ್ಕೆ ಖಂಡಿತವಾಗಿಯೂ ಮುಜುಗರ ತಂದಿದೆ ಎಂದರು. ಅವರ ಹೆಸರನ್ನು ಉಲ್ಲೇಖಿಸದೆ, ಟ್ರಂಪ್ ನ್ಯಾಯಮೂರ್ತಿಗಳ ಕ್ರಿಯೆಯನ್ನು ಅತ್ಯಂತ ದೇಶಭಕ್ತಿ ವಿರೋಧಿ ಮತ್ತು ನಮ್ಮ ಸಂವಿಧಾನಕ್ಕೆ ನಿಷ್ಠೆಯಿಲ್ಲದವರು ಎಂದರು. ತಮ್ಮ ಶುಲ್ಕದಿಂದ ಸಿಕ್ಕ ಸುಮಾರು 133 ಬಿಲಿಯನ್ ಡಾಲರ್ ಮರುಪಾವತಿಸುವ ವಿಷಯದ ಬಗ್ಗೆ, ಕಾನೂನು ಹೋರಾಟವು ವರ್ಷಗಳವರೆಗೆ ಸಾಗಬಹುದು ಎಂದರು.

ಅಮೆರಿಕದ ಸರ್ವೋಚ್ಚ ನ್ಯಾಯಾಲಯ ಶುಕ್ರವಾರ, ಕನ್ಸರ್ವೇಟಿವ್ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ರಚಿಸಿದ 6-3 ತೀರ್ಪಿನಲ್ಲಿ, ಟ್ರಂಪ್ 1977 ಕಾನೂನನ್ನು ಬಳಸಿ ಶುಲ್ಕ ವಿಧಿಸುವ ಶಕ್ತಿ ಅವರ ಅಧಿಕಾರಕ್ಕಿಂತ ಮೇಲಿನದ್ದಾಗಿದೆ ಎಂದು ತೀರ್ಪು ನೀಡಿ ಕೆಳ ನ್ಯಾಯಾಲಯದ ತೀರ್ಪನ್ನು ಮಾನ್ಯ ಮಾಡಿತು.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago