Mysore
21
overcast clouds
Light
Dark

ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡೇ ಜನರೆದುರು ಪ್ರತ್ಯಕ್ಷವಾದ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ದಾಳಿಯಿಂದ ಪಾರಾದ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಅಮೇರಿಕಾದ ಅಧ್ಯಕ್ಷೀಯ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಚುನಾವಣೆಗೆ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ರಿಪಬ್ಲಿಕನ್‌ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಕಣಕ್ಕಿಳಿದಿದ್ದಾರೆ. ಚುನಾವಣಾ ರ್ಯಾಲಿ ವೇಳೆ ಟ್ರಂಪ್‌ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದನು. ಈ ವೇಳೆ ಅವರ ಕಿವಿಗೆ ಗುಂಡು ತಗುಲಿತ್ತು. ಆದರೂ ಡೊನಾಲ್ಡ್‌ ಟ್ರಂಪ್‌ ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡೇ ಸಾರ್ವಜನಿಕವಾಗಿ ಪ್ರತ್ಯಕ್ಷವಾಗಿದ್ದು, ಯಾವ ಬೆದರಿಕೆಗೂ ನಾನು ಜಗ್ಗುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

ಪಿಸರ್ವ್‌ ಫೋರಂ ಮಿಲ್ವೌಕಿಯಲ್ಲಿರುವ ರಿಪಬ್ಲಿಕನ್‌ ನ್ಯಾಷನಲ್‌ ಕನ್ವೆನ್‌ಷನ್‌ನಲ್ಲಿ ಕಾಣಿಸಿಕೊಂಡ ಟ್ರಂಪ್‌ ಅವರು, ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಈ ಮೂಲಕ ಗುಂಡಿನ ದಾಳಿ ಬಳಿಕ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ ಅನುಕಂಪ ಸೃಷ್ಟಿಯಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಇನ್ನೂ ಗುಂಡಿನ ದಾಳಿ ಬಗ್ಗೆ ಡೊನಾಲ್ಡ್‌ ಟ್ರಂಪ್‌ ಪ್ರತಿಕ್ರಿಯಿಸಿದ್ದು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಘಟನೆ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆಯುವುದು ನಂಬಲು ಅಸಾಧ್ಯ ಎದು ಬೇಸರ ವ್ಯಕ್ತಪಡಿಸಿದ್ದಾರೆ.