ವಾಷಿಂಗ್ಟನ್: ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ದಾಳಿಯಿಂದ ಪಾರಾದ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ಅಮೇರಿಕಾದ ಅಧ್ಯಕ್ಷೀಯ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಚುನಾವಣೆಗೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ರಿಪಬ್ಲಿಕನ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಕಣಕ್ಕಿಳಿದಿದ್ದಾರೆ. ಚುನಾವಣಾ ರ್ಯಾಲಿ ವೇಳೆ ಟ್ರಂಪ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದನು. ಈ ವೇಳೆ ಅವರ ಕಿವಿಗೆ ಗುಂಡು ತಗುಲಿತ್ತು. ಆದರೂ ಡೊನಾಲ್ಡ್ ಟ್ರಂಪ್ ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಕಿವಿಗೆ ಬ್ಯಾಂಡೇಜ್ ಕಟ್ಟಿಕೊಂಡೇ ಸಾರ್ವಜನಿಕವಾಗಿ ಪ್ರತ್ಯಕ್ಷವಾಗಿದ್ದು, ಯಾವ ಬೆದರಿಕೆಗೂ ನಾನು ಜಗ್ಗುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.
ಪಿಸರ್ವ್ ಫೋರಂ ಮಿಲ್ವೌಕಿಯಲ್ಲಿರುವ ರಿಪಬ್ಲಿಕನ್ ನ್ಯಾಷನಲ್ ಕನ್ವೆನ್‌ಷನ್‌ನಲ್ಲಿ ಕಾಣಿಸಿಕೊಂಡ ಟ್ರಂಪ್ ಅವರು, ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಈ ಮೂಲಕ ಗುಂಡಿನ ದಾಳಿ ಬಳಿಕ ಡೊನಾಲ್ಡ್ ಟ್ರಂಪ್ ಅವರ ಮೇಲೆ ಅನುಕಂಪ ಸೃಷ್ಟಿಯಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಇನ್ನೂ ಗುಂಡಿನ ದಾಳಿ ಬಗ್ಗೆ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಘಟನೆ ಬಗ್ಗೆ ಪೋಸ್ಟ್ ಮಾಡಿದ್ದಾರೆ. ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆಯುವುದು ನಂಬಲು ಅಸಾಧ್ಯ ಎದು ಬೇಸರ ವ್ಯಕ್ತಪಡಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…