ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಭಾರತ ಸರ್ಕಾರ ಕಠಿಣವಾಗಿ ಪ್ರತಿಕ್ರಿಯೆ ನೀಡಿದ್ದು, ಅಜ್ಞಾನಪೂರ್ವ ಹೇಳಿಕೆ ಎಂದು ಖಂಡಿಸಿದೆ.
ಈ ವಿವಾದಕ್ಕೆ ಕಾರಣವಾದದ್ದು ಟ್ರಂಪ್ ಅವರು ಸಾಮಾಜಿಕ ಜಾಲತಾಣದಲ್ಲಿ ಮರುಹಂಚಿಕೊಂಡ ಅಮೇರಿಕಾದ ಪ್ರಮುಖ ಸಂಪ್ರದಾಯವಾದಿ ಲೇಖಕ ಮತ್ತು ರೇಡಿಯೋ ನಿರೂಪಕ ಮೈಕೆಲ್ ಸ್ಯಾವೇಜ್ ಅವರ ಪಾಡ್‌ಕಾಸ್ಟ್.
ಅದರಲ್ಲಿ ಭಾರತ ಸೇರಿದಂತೆ ಕೆಲವು ದೇಶಗಳನ್ನು ಅವಮಾನಕಾರಿ ರೀತಿಯಲ್ಲಿ ಉಲ್ಲೇಖಿಸಲಾಗಿತ್ತು. ಜೊತೆಗೆ ವಲಸೆ ನೀತಿ ಮತ್ತು ಜನ್ಮಸಿದ್ಧ ಪೌರತ್ವದ ಕುರಿತು ತೀವ್ರ ಟೀಕೆಗಳನ್ನು ಮಾಡಲಾಗಿತ್ತು.
ಟ್ರಂಪ್ ಟೀಕೆ ಕುರಿತು ರಣಧೀರ್ ಜೈಸ್ವಾಲ್ ಸ್ಪಷ್ಟ ಪ್ರತಿಕ್ರಿಯೆ ನೀಡಿದ್ದು, ಇಂತಹ ಹೇಳಿಕೆಗಳು ಅಜ್ಞಾನಪೂರ್ಣವಾಗಿದ್ದು, ಅಸಮಂಜಸ ಹಾಗೂ ಕೆಟ್ಟ ಅಭಿರುಚಿಯುಳ್ಳದ್ದಾಗಿದೆ ಎಂದು ಹೇಳಿದ್ದಾರೆ.
ಒಟ್ಟಾರೆಯಾಗಿ ಈ ಘಟನೆಯಿಂದ ಭಾರತದಲ್ಲಿ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ವಿರೋಧ ಪಕ್ಷಗಳು ಟ್ರಂಪ್ ಅವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ್ದು, ಕೇಂದ್ರ ಸರ್ಕಾರವು ಈ ವಿಚಾರ ಕುರಿತು ಧ್ವನಿ ಎತ್ತಬೇಕು ಎಂದು ಆಗ್ರಹಿಸಿವೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…