ವಾಷಿಂಗ್ಟನ್: ಅಮೇರಿಕಾ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದರೆ ಅಂತಹವರನ್ನು ತಕ್ಷಣವೇ ಬಂಧಿಸಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ್ದಾರೆ.
ಧ್ವಜ ಅಪವಿತ್ರಗೊಳಿಸುವವರನ್ನು ಶಿಕ್ಷಿಸಲು ಟ್ರಂಪ್ ಬಹಳ ಹಿಂದಿನಿಂದಲೂ ಒತ್ತಾಯಿಸುತ್ತಿದ್ದರು. ಈಗ ತಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ತೀಕ್ಷ್ಣಗೊಳಿಸಲು ಟ್ರಂಪ್ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:-ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ
ಇನ್ನು ಮಾಹಿತಿಯ ಪ್ರಕಾರ ಡೊನಾಲ್ಡ್ ಟ್ರಂಪ್ ಅವರ ಈ ಆದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಇಲಾಖೆ ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ.





