ಕಾಶ್ಮೀರ ವಿವಾದ : ಶಾಶ್ವತ ಪರಿಹಾರಕ್ಕೆ ಸಿದ್ಧ ಎಂದ ಟ್ರಂಪ್

ವಾಷಿಂಗ್ಟನ್ : ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಒಪ್ಪಂದದಲ್ಲಿ ತಮ್ಮ ಪಾತ್ರವಿದೆ ಎಂದು ಗಟ್ಟಿಯಾಗಿ ಪ್ರತಿಪಾದಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಭಾರತ ಮತ್ತು ಪಾಕಿಸ್ತಾನದೊಂದಿಗೆ ಕೆಲಸ ಮಾಡಲು ಸಿದ್ಧ ಎಂದು ಘೋಷಿಸಿದ್ದಾರೆ.

ಕದನ ವಿರಾಮ ಘೋಷಿಸಿದ್ದಕ್ಕೆ ಶುಭಕೋರಿದ ಟ್ರಂಪ್ ಈ ಐತಿಹಾಸಿಕ ನಿರ್ಧಾರಕ್ಕೆ ಅಮೆರಿಕ ಸಹಾಯ ಮಾಡಲು ಸಾಧ್ಯವಾಗಿದ್ದಕ್ಕೆ ನನಗೆ ಹೆಮ್ಮೆ ಇದೆ. ಇದರ ಬಗ್ಗೆ ಚರ್ಚೆ ಮಾಡದಿದ್ದರೂ, ನಾನು ಈ ಎರಡು ದೇಶಗಳೊಂದಿಗೆ ವ್ಯಾಪಾರವನ್ನು ಹೆಚ್ಚಿಸುತ್ತೇನೆ. ಕಾಶ್ಮೀರದ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ನಿಮ್ಮೊಂದಿಗೆ ಕೆಲಸ ಮಾಡುತ್ತೇನೆ. ದೇವರು ಭಾರತ ಮತ್ತು ಪಾಕಿಸ್ತಾನದ ನಾಯಕರಿಗೆ ಒಳ್ಳೆಯದನ್ನು ಮಾಡಲಿ ಎಂದು ಆಶಿಸಿದ್ದಾರೆ.

ಪರಸ್ಪರ ಆಕ್ರಮಣವು ಲಕ್ಷಾಂತರ ಜನರ ಸಾವಿಗೆ ಕಾರಣವಾಗಬಹುದು. ಕಾಶ್ಮೀರ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಅವರೊಂದಿಗೆ ಕೆಲಸ ಮಾಡಲು ಸಿದ್ದ. ಉಭಯ ರಾಷ್ಟ್ರಗಳು ಬಯಸಿದರೆ ಅಮೆರಿಕ ಮಾತುಕತೆಯ ಮಧ್ಯಸ್ಥಿಕೆಯ ಜವಾಬ್ದಾರಿಯನ್ನು ನಿಭಾಯಿಸಲಿದೆ ಎಂದಿದ್ದಾರೆ. ಆದರೆ ಭಾರತ ಅಮೆರಿಕ ಅಧ್ಯಕ್ಷರ ಈ ಆಫರನ್ನು ಒಪ್ಪಿಕೊಳ್ಳುವುದಿಲ್ಲ ಎಂಬುದು ಖಚಿತ.

ಕಾಶ್ಮೀರ ನಮ್ಮ ಅವಿಭಾಜ್ಯ ಅಂಗ ಎಂದು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿರುವ ಭಾರತ, ಈ ವಿಚಾರವಾಗಿ ಮೂರನೇ ಶಕ್ತಿಯ ಮಧ್ಯಸ್ಥಿಕೆಯನ್ನು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

1972ರಲ್ಲಿ ನಡೆದ ಶಿವ್ಲಾ ಒಪ್ಪಂದದಂತೆ, ಕಾಶ್ಮೀರ ವಿವಾದ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ವಿಚಾರವಾಗಿದ್ದು, ಈ ಸಮಸ್ಯೆಯನ್ನು ಉಭಯ ರಾಷ್ಟ್ರಗಳು ಮಾತ್ರ ಪರಿಹರಿಸಿಕೊಳ್ಳಬೇಕು. ಈ ವಿಚಾರದಲ್ಲಿ ಮೂರನೇ ಶಕ್ತಿಯ ಮಧ್ಯಸ್ಥಿಕೆಗೆ ಅವಕಾಶವಿಲ್ಲ ಎಂಬುದನ್ನು ಭಾರತ ಪದೇ ಪದೇ ಪುನರುಚ್ಛಿಸಿದೆ.

ಆದಾಗ್ಯೂ, ಡೊನಾಲ್ಡ್ ಟ್ರಂಪ್ ಕಾಶ್ಮೀರ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು, ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ಜವಾಬ್ದಾರಿ ವಹಿಸಲು ಸಿದ್ಧ ಎಂದು ಹೇಳಿರುವುದು ಇದೀಗ ಜಾಗತಿಕವಾಗಿ ಗಮನ ಸೆಳೆದಿದೆ.

ಅಮೆರಿಕದ ಮಧ್ಯಸ್ಥಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಈ ಮಧ್ಯಸ್ಥಿಕೆ ಮಾತುಕತೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ಪ್ರಧಾನ ಮಂತ್ರಿಗಳು, ವಿದೇಶಾಂಗ ಸಚಿವರು, ಸೇನಾ ಮುಖ್ಯಸ್ಥರು ಈ ಮಾತುಕತೆಯಲ್ಲಿ ಭಾಗವಹಿಸಿದ್ದರು. ಮೇ 12(ಸೋಮವಾರ) ಉಭಯ ದೇಶಗಳ ಡಿಜಿಎಂಓ ನಡುವೆ ಮಹತ್ವದ ಸಭೆ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನದ ನಾಯಕತ್ವವನ್ನು ಹೊಗಳಿರುವ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ಪ್ರಬಲ ನಾಯಕತ್ವವು ಈಗಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದೆ. ಯುದ್ಧವನ್ನು ನಿಲ್ಲಿಸುವ ನಿರ್ಧಾರ ತೆಗೆದುಕೊಂಡಿರುವುದು ನಿಜಕ್ಕೂ ಶ್ಲಾಘನೀಯ. ಇದರಿಂದ ಅನೇಕ ಜನರ ಜೀವ ಉಳಿದಿದೆ. ನಿಮ್ಮ ಈ ಧೈರ್ಯಶಾಲಿ ನಿರ್ಧಾರದಿಂದ ನಿಮ ಕೀರ್ತಿ ಹೆಚ್ಚಾಗಿದೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಅಮೆರಿಕ ಸಹಾಯದಿಂದ ಈ ಐತಿಹಾಸಿಕ ನಿರ್ಧಾರಕ್ಕೆ ಬರಲು ಸಾಧ್ಯವಾಯಿತು ಎಂಬುದು ಡೊನಾಲ್ಡ್ ಟ್ರಂಪ್ ಅವರ ವಾದ. ಇಷ್ಟೇ ಅಲ್ಲದೇ ಭಾರತ ಮತ್ತು ಪಾಕಿಸ್ತಾನದ ಜೊತೆ ವ್ಯಾಪಾರ ಸಂಬಂಧ ವೃದ್ಧಿಸಲು ಬಯಸುವುದಾಗಿ ಅಮೆರಿಕ ಅಧ್ಯಕ್ಷರು ಹೇಳಿದ್ದಾರೆ. ಅಲ್ಲದೇ ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವೇ ಎಂಬುದನ್ನು ನೋಡೋಣ ಎಂದಿರು ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ನಾಯಕತ್ವಕ್ಕೆ ದೇವರು ಒಳ್ಳೆಯದು ಮಾಡಲಿ ಎಂದು ಆಶಿಸಿದ್ದಾರೆ.

ಒಟ್ಟಿನಲ್ಲಿ ಕಾಶ್ಮೀರ ವಿವಾದದ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಧಾನಕಾರನ ಪಾತ್ರವಹಿಸಲು ಸಿದ್ಧ ಎಂದು ಡೊನಾಲ್ಡ್ ಟ್ರಂಪ್ ಹೇಳುತ್ತಿದ್ದಾರೆ. ಆದರೆ ಟ್ರಂಪ್ ಆಫರ್‍ನ್ನು ಪಾಕಿಸ್ತಾನ ಒಪ್ಪಿದರೂ, ಭಾರತ ಮಾತ್ರ ಖಂಡಿತ ಒಪ್ಪುವುದಿಲ್ಲ ಎಂಬುದು ಖಚಿತ.

ಕದನ ವಿರಾಮ ಘೋಷಿಸಿರುವ ಭಾರತ ಪಾಕ್ ಎರಡೂ ದೇಶಕ್ಕೆ ಶುಭಾಶಯ ಕೋರಿದ ಟ್ರಂಪ್, 1000 ವರ್ಷ ಹಳೆಯ ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಮಧ್ಯಸ್ಥಿತಿ ವಹಿಸುತ್ತೇನೆ ಬೇಕಾದ್ರೆ ಎಂದಿರುವ ಟ್ರಂಪ್‍ಗೆ ಭಾರೀ ವಿರೋಧ ವ್ಯಕ್ತವಾಗಿದೆ. ಇದು ಸಾವಿರ ವರ್ಷ ಹಳೆಯ ಸಮಸ್ಯೆ ಅಲ್ಲ ಎಂದು ಕಾಂಗ್ರೆಸ್ ಮುಖಂಡರು ಬುದ್ಧಿವಾದ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

16 mins ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

26 mins ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

48 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

1 hour ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

1 hour ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago