Mysore
26
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಪುರಿ ಜಗನ್ನಾಥ ದೇವಾಲಯದ ಮೇಲೆ ಡ್ರೋನ್‌ ಹಾರಾಟ: ಪೊಲೀಸ್‌ ಭದ್ರತೆ

ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದ ಮೇಲೆ ಇಂದು ಡ್ರೋನ್‌ ಹಾರಾಟ ನಡೆಸಿದ್ದು, ದೇವಾಲಯದ ಸುತ್ತ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಡ್ರೋನ್‌ ಹಾರಾಟ ನಡೆಸಿರುವ ಹಿನ್ನೆಲೆಯಲ್ಲಿ ತನಿಖೆಗಾಗಿ ವಿಶೇಷ ತಂಡವನ್ನು ಸಹ ರಚನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಮುಂಜಾನೆ 4.10ರ ಸುಮಾರಿಗೆ ದೇವಸ್ಥಾನದ ಮೇಲೆ ಡ್ರೋನ್‌ ಹಾರಾಟ ನಡೆಸಿದ್ದು, ಸುಮಾರು ಅರ್ಧಗಂಟೆಗಳ ಕಾಲ ಇದು ಹಾರಾಡಿದೆ. ಇದರಿಂದ ಭಯದ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಸುತ್ತ ಪೊಲೀಸ್‌ ಭದ್ರತೆಯನ್ನು ನಿಯೋಜಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಕಾನೂನು ಸಚಿವ ಪೃಥ್ವಿರಾಜ್‌ ಹರಿಚಂದನ್‌ ಅವರು, ದೇವಸ್ಥಾನದ ಮೇಲೆ ಡ್ರೋನ್‌ ಹಾರಿಸುವುದು ಕಾನೂನು ಬಾಹಿರ. ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಂಬಂಧಪಟ್ಟ ವ್ಯಕ್ತಿಯನ್ನು ಪತ್ತೆ ಹಚ್ಚಿ, ಡ್ರೋನ್‌ ಅನ್ನು ವಶಪಡಿಸಿಕೊಳ್ಳಲಾಗುವುದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಿ ಎಸ್ಪಿ ಅವರು ವಿಶೇಷ ತಂಡಗಳನ್ನು ರಚಿಸಿ, ತನಿಖೆ ಪ್ರಾರಂಭಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನು ಘಟನೆ ಸಂಬಂಧ ಯಾರೂ ಒಬ್ಬ ವ್ಯಕ್ತಿ ವ್ಲಾಗರ್‌ ಡ್ರೋನನ್ನು ದೇವಸ್ಥಾನದ ಮೇಲೆ ಹಾರಿಸಿರಬಹುದು ಎಂದು ಶಂಕಿಸಲಾಗಿದೆ. ಆದರೆ ತನಿಖೆ ನಡೆಸಿ, ಅದರ ಹಿಂದಿನ ಉದ್ದೇಶ ತಿಳಿದುಕೊಳ್ಳಲು ವಿಶೇಷ ತಂಡ ರಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Tags:
error: Content is protected !!