ದೇಶ- ವಿದೇಶ

ಪುರಿ ಜಗನ್ನಾಥ ದೇವಾಲಯದ ಮೇಲೆ ಡ್ರೋನ್‌ ಹಾರಾಟ: ಪೊಲೀಸ್‌ ಭದ್ರತೆ

ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದ ಮೇಲೆ ಇಂದು ಡ್ರೋನ್‌ ಹಾರಾಟ ನಡೆಸಿದ್ದು, ದೇವಾಲಯದ ಸುತ್ತ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಡ್ರೋನ್‌ ಹಾರಾಟ ನಡೆಸಿರುವ ಹಿನ್ನೆಲೆಯಲ್ಲಿ ತನಿಖೆಗಾಗಿ ವಿಶೇಷ ತಂಡವನ್ನು ಸಹ ರಚನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಮುಂಜಾನೆ 4.10ರ ಸುಮಾರಿಗೆ ದೇವಸ್ಥಾನದ ಮೇಲೆ ಡ್ರೋನ್‌ ಹಾರಾಟ ನಡೆಸಿದ್ದು, ಸುಮಾರು ಅರ್ಧಗಂಟೆಗಳ ಕಾಲ ಇದು ಹಾರಾಡಿದೆ. ಇದರಿಂದ ಭಯದ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಸುತ್ತ ಪೊಲೀಸ್‌ ಭದ್ರತೆಯನ್ನು ನಿಯೋಜಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಕಾನೂನು ಸಚಿವ ಪೃಥ್ವಿರಾಜ್‌ ಹರಿಚಂದನ್‌ ಅವರು, ದೇವಸ್ಥಾನದ ಮೇಲೆ ಡ್ರೋನ್‌ ಹಾರಿಸುವುದು ಕಾನೂನು ಬಾಹಿರ. ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಂಬಂಧಪಟ್ಟ ವ್ಯಕ್ತಿಯನ್ನು ಪತ್ತೆ ಹಚ್ಚಿ, ಡ್ರೋನ್‌ ಅನ್ನು ವಶಪಡಿಸಿಕೊಳ್ಳಲಾಗುವುದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಿ ಎಸ್ಪಿ ಅವರು ವಿಶೇಷ ತಂಡಗಳನ್ನು ರಚಿಸಿ, ತನಿಖೆ ಪ್ರಾರಂಭಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನು ಘಟನೆ ಸಂಬಂಧ ಯಾರೂ ಒಬ್ಬ ವ್ಯಕ್ತಿ ವ್ಲಾಗರ್‌ ಡ್ರೋನನ್ನು ದೇವಸ್ಥಾನದ ಮೇಲೆ ಹಾರಿಸಿರಬಹುದು ಎಂದು ಶಂಕಿಸಲಾಗಿದೆ. ಆದರೆ ತನಿಖೆ ನಡೆಸಿ, ಅದರ ಹಿಂದಿನ ಉದ್ದೇಶ ತಿಳಿದುಕೊಳ್ಳಲು ವಿಶೇಷ ತಂಡ ರಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ಮೃಗಾಲಯದ ಹುಲಿ ʼಪೃಥ್ವಿʼ ಇನ್ನಿಲ್ಲ

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…

6 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಏಪ್ರಿಲ್‌ 9  

36 mins ago

ಕೇರಳ,ಪುದುಚೇರಿ,ಅಸ್ಸಾಂ ವಿಧಾನಸಭಾ ಚುನಾವಣೆ : ಮತದಾನ ಆರಂಭ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…

1 hour ago

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…

1 hour ago

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

11 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

14 hours ago