ಕೊಚ್ಚಿ: ಮಲಯಾಳಂ ಚಿತ್ರರಂಗಕ್ಕೆ ಮಾದಕ ವಸ್ತುಗಳು ತಸು ಗಟ್ಟಿಯಾಗಿಯೇ ಅಂಟಿದಂತಿದೆ. ಸತತವಾಗಿ ಒಬ್ಬರ ಮೇಲೆಬ್ಬರು ಮಾದಕ ವಸ್ತು ಪ್ರಕರಣದಲ್ಲಿ ಸಿಕ್ಕಿ ಬೀಳುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಚಿತ್ರರಂಗದ ಅನೇಕರು ಮಾದಕ ವಸ್ತು ಪ್ರಕರಣದಲ್ಲಿ ಸಿಕ್ಕಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇದೀಗ ಮಾದಕ ವಸ್ತುಗಳನ್ನು ಇಟ್ಟುಕೊಂಡಿದ್ದ ಮಲೆಯಾಳಂ ಸಿನಿಮಾ ಇಬ್ಬರು ನಿರ್ದೇಶಕರನ್ನು ಕೊಚ್ಚಿ ಪೊಲೀಸರು ಭಾನುವಾರ ಬಂಧಿಸಿದ್ದಾರೆಂದು ತಿಳಿದುಬಂದಿದೆ.
ಖಾಲೀದ್ ರೆಹಮಾನ್ ಹಾಗೂ ಆಶ್ರಫ್ ಹಮ್ಜಾ ಬಂಧಿತ ಆರೋಪಿಗಳಾಗಿದ್ದಾರೆ. ಇಬ್ಬರ ಬಳಿಯಿದ್ದ ಹೈಬ್ರೀಡ್ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೌಪ್ಯ ಮಾಹಿತಿಯ ಮೇರೆಗೆ ದಾಳಿ ನಡೆಸಿರುವ ಅಬಕಾರಿ ಇಲಾಖೆ ಅಧಿಕಾರಿಗಳು ಭಾನುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಿರ್ದೇಶಕರನ್ನು ಬಂಧಿಸಿದ್ದಾರೆ.
ಆಲಪ್ಪುಳ ಜಿಮ್ಖಾನಾ ಮತ್ತು ತಲ್ಲುಮಾಲಾದಂತಹ ಸಿನಿಮಾಗಳನ್ನು ನಿರ್ದೇಶಿಸಿದ ಮತ್ತು ಮಂಜುಮಲ್ ಬಾಯ್ಸ್ ಚಿತ್ರದಲ್ಲಿ ನಟಿಸಿದ್ದ ರೆಹಮಾನ್, ತಮಾಶಾ, ಭೀಮಂತೆ ವಾಝಿ ಮತ್ತು ಸುಲೈಖಾ ಮಂಜಿಲ್ ಚಿತ್ರದ ನಿರ್ದೇಶಕ ಹಮ್ಜಾ ಮನೆಗಳ ಮೇಲೆ ದಾಳಿ ನಡೆಸಿದಾಗ ಗಾಂಜಾ ಪತ್ತೆಯಾಗಿದ್ದು, ನಂತಹ ಇಬ್ಬರು ನಿರ್ದೇಶಕರು ಸೇರಿ ಹಲವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಈ ದಾಳಿ ನಡೆದಿದೆ, ಕೊಚ್ಚಿಯ ಗೋರ್ಸಿ ಬ್ರಿಡ್ಜ್ ಮೇಲೆ ದಾಳಿ ಮಾಡಿದಾಗ ಗಾಂಜಾ ಇರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ. ರೆಹಮಾನ್ ಮತ್ತು ಹಮ್ಜಾ ನಿಯಮಿತ ಮಾದಕ ದ್ರವ್ಯ ಬಳಕೆದಾರರು ಎಂದು ಅಬಕಾರಿ ಇಲಾಖೆ ದೃಢಪಡಿಸಿದೆ.
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…
ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…
ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…
ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…
ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ…