Mysore
20
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಜನಸ್ಪಂದನಾ ಕಾರ್ಯಕ್ರಮದ ವೇಳೆ ದೆಹಲಿ ಸಿಎಂ ರೇಖಾ ಗುಪ್ತಾಗೆ ಕಪಾಳಮೋಕ್ಷ: ವ್ಯಕ್ತಿಯ ಬಂಧನ

ನವದೆಹಲಿ: ಜನಸ್ಪಂದನಾ ಕಾರ್ಯಕ್ರಮದಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ.

35 ವರ್ಷದ ವ್ಯಕ್ತಿಯೊಬ್ಬ ಸಿಎಂ ರೇಖಾ ಗುಪ್ತಾ ಅವರ ಬಳಿ ಹಲವು ದಾಖಲೆಗಳನ್ನು ಹಿಡಿದುಕೊಂಡು ಬಂದಿದ್ದನು. ಈ ವೇಳೆ ನೋಡನೋಡುತ್ತಿದ್ದಂತೆ ರೇಖಾ ಗುಪ್ತಾ ಅವರಿಗೆ ಕಪಾಳಮೋಕ್ಷ ಮಾಡಿದ್ದಾನೆ.

ಕೂಡಲೇ ಆ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ಸಿವಿಲ್‌ ಲೈನ್ಸ್‌ ಪೊಲೀಸ್‌ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಹಿಂದಿನ ಕಾರಣ ಇನೂ ತಿಳಿದುಬಂದಿಲ್ಲ.

ಇನ್ನು ದೆಹಲಿ ಸಿಎಂ ರೇಖಾ ಗುಪ್ತಾ ಅವರು ಮೇಲಿನ ದಾಳಿಯನ್ನು ಮಾಜಿ ಸಿಎಂ ಅತಿಶಿ ಖಂಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಎಂ ಮೇಲಿನ ದಾಳಿ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ಮತ್ತು ಪ್ರತಿಭಟನೆಗೆ ಅವಕಾಶವಿದೆ. ಆದರೆ ಹಿಂಸಾಚಾರಕ್ಕೆ ಸ್ಥಳವಿಲ್ಲ. ದೆಹಲಿ ಪೊಲೀಸರು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಆಶಿಸುತ್ತೇನೆ. ಸಿಎಂ ಸಂಪೂರ್ಣವಾಗಿ ಸುರಕ್ಷಿತವಾಗಿದ್ದಾರೆ ಎಂದು ಆಶಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

Tags:
error: Content is protected !!