ನವದೆಹಲಿ: ಜನಸ್ಪಂದನಾ ಕಾರ್ಯಕ್ರಮದಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ.
35 ವರ್ಷದ ವ್ಯಕ್ತಿಯೊಬ್ಬ ಸಿಎಂ ರೇಖಾ ಗುಪ್ತಾ ಅವರ ಬಳಿ ಹಲವು ದಾಖಲೆಗಳನ್ನು ಹಿಡಿದುಕೊಂಡು ಬಂದಿದ್ದನು. ಈ ವೇಳೆ ನೋಡನೋಡುತ್ತಿದ್ದಂತೆ ರೇಖಾ ಗುಪ್ತಾ ಅವರಿಗೆ ಕಪಾಳಮೋಕ್ಷ ಮಾಡಿದ್ದಾನೆ.
ಕೂಡಲೇ ಆ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಹಿಂದಿನ ಕಾರಣ ಇನೂ ತಿಳಿದುಬಂದಿಲ್ಲ.
ಇನ್ನು ದೆಹಲಿ ಸಿಎಂ ರೇಖಾ ಗುಪ್ತಾ ಅವರು ಮೇಲಿನ ದಾಳಿಯನ್ನು ಮಾಜಿ ಸಿಎಂ ಅತಿಶಿ ಖಂಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಮೇಲಿನ ದಾಳಿ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ಮತ್ತು ಪ್ರತಿಭಟನೆಗೆ ಅವಕಾಶವಿದೆ. ಆದರೆ ಹಿಂಸಾಚಾರಕ್ಕೆ ಸ್ಥಳವಿಲ್ಲ. ದೆಹಲಿ ಪೊಲೀಸರು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಆಶಿಸುತ್ತೇನೆ. ಸಿಎಂ ಸಂಪೂರ್ಣವಾಗಿ ಸುರಕ್ಷಿತವಾಗಿದ್ದಾರೆ ಎಂದು ಆಶಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…
ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…
ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…
ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…