ಬ್ಯಾಂಕಾಕ್ : ಮ್ಯಾನ್ಮಾರ್ ಮತ್ತು ಥೈಯ್ಲಾಂಡ್ ದೇಶಗಳಲ್ಲಿ ಭೂಕಂಪ ಸಂಭವಿಸಿದೆ. ಭಾರಿ ಪ್ರಮಾಣದ ಭೂಕಂಪ ಇದಾಗಿದ್ದು, ರಿಕ್ಟರ್ ಮಾಪನದಲ್ಲಿ 7.7ರಷ್ಟು ತೀವ್ರತೆ ದಾಖಲಾಗಿದೆ. ಗಗನಚುಂಬಿ ಕಟ್ಟಡಗಳು ನೆಲಕಚ್ಚಿದ್ದು, ಸಾವು ನೋವುಗಳು ವರದಿಯಾಗಿದೆ. ಈ ಘಟನೆ ಬೆನ್ನಲ್ಲೇ ಭಾರತದ ಕೋಲ್ಕತ್ತ ಮತ್ತು ಇಂಫಾನ್‌ನಲ್ಲೂ ಕಂಪನದ ಅನುಭವವಾಗಿದೆ.
ಈ ಕುರಿತು ಕೋಲ್ಕತ್ತಾದ ಜನ ಭೂಕಂಪನ ಅನುಭವವನ್ನು ಹೇಳಿಕೊಂಡಿದ್ದಾರೆ.
ಭೂಕಂಪನದ ತೀವ್ರತೆಗೆ ಗಗನಚುಂಬಿ ಕಟ್ಟಡಗಳು ಧರೆಗುರುಳಿದವು. ಈ ವೇಳೆ ಭಾರಿ ಪ್ರಮಾಣದ ಧೂಳೂ ಇಡೀ ನಗರವನ್ನೇ ಆವರಿಸಿತು. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ದೃಶ್ಯದಲ್ಲಿ ಜನರ ಚೀರಾಟಗಳು ಹೃದಯ ಕಲಕುವಂತಿದೆ.
ಪ್ರಾಥಮಿಕ ವರದಿ ಪ್ರಕಾರ, ಮ್ಯಾನ್ಮಾರ್‌ನ ಮಂಡಲೆ ನಗರದ ಬಳಿ10ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಮತ್ತು ಜರ್ಮನಿಯ ಜೆಎಫ್‌ಝಡ್ ಭೂವಿಜ್ಞಾನ ಕೇಂದ್ರ ಹೇಳಿದೆ.
ಭೂಕಂಪನದ ಅನುಭವ ಭಾರತದ ಕೋಲ್ಕತ್ತ ಮತ್ತು ಇಂಫಾನ್‌ನಲ್ಲೂ ಜೊತೆಗೆ ಮೇಘಾಲಯದ ಪೂರ್ವ ಗರೊ ಪರ್ವತ ಶ್ರೇಣಿಯಲ್ಲಿ ಕಂಪನದ ಅನುಭವವಾಗಿದೆ. ಈ ವೇಳೆ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಯಾವುದೇ ಹಾನಿಯ ಕುರಿತು ವರದಿಯಾಗಿಲ್ಲ.
ಘಟನೆ ಕುರಿತು ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ ನೆರವಿಗೆ ಸಿದ್ಧ ಎಂದು ಅಭಯ ನೀಡಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…