Mysore
28
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ

ಇಂಡೋನೇಷ್ಯಾ : ಪೂರ್ವ ಇಂಡೋನೇಷ್ಯಾದ ಕೆಲವು ಭಾಗಗಳಲ್ಲಿ ಬುಧವಾರ ಬೆಳಗಿನ ಜಾವ ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ಕಂಡುಬಂದಿದ್ದು, ಯಾವುದೇ ಸಾವು–ನೋವಿನ ವರದಿಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಮೆರಿಕದ ಜಿಯೋಲಾಜಿಕಲ್ ಸರ್ವೆ ವರದಿ ಪ್ರಕಾರ, 6.1 ತೀವ್ರತೆಯ ಭೂಕಂಪ ದಾಖಲಾಗಿದೆ.

ಭೂಕಂಪದ ಬಳಿಕ ಇಂಡೋನೇಷ್ಯಾದ ಹವಾಮಾನ ಮತ್ತು ಜಿಯೋಫಿಸಿಕ್ಸ್ ಏಜೆನ್ಸಿ, ಸುನಾಮಿ ಸಾಧ್ಯತೆಯ ಕುರಿತು ಯಾವುದೇ ಎಚ್ಚರಿಕೆ ನೀಡಿಲ್ಲ.

ಇಂಡೋನೇಷ್ಯಾದಲ್ಲಿ ಹಲವು ಬಾರಿ ಲಘು ಮತ್ತು ದೊಡ್ಡ ಪ್ರಮಾಣದಲ್ಲಿ ಭೂಕಂಪ ಸಂಭವಿಸಿದೆ. ಕಳೆದ ನವೆಂಬರ್‌ನಲ್ಲಿ ಪಶ್ಷಿಮ ಜಾವಾದಲ್ಲಿ ಸಂಭವಿಸಿದ್ದ ಭೂಕಂಪದಲ್ಲಿ ಕನಿಷ್ಠ 331 ಜನರು ಮೃತಪಟ್ಟಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!