ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಶ್ಯಾಮ್ ಬಿಹಾರಿ ಜೈಸ್ವಾಲ್ ಮಾತನಾಡಿ, ಸದ್ಯ ಆಫ್ರಿಕಾದ ಮೂವರು ಪ್ರಜೆಗಳನ್ನು ದುರ್ಗ್‌ನಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿಗತಿಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಈವರೆಗೂ ಎಬೋಲಾ ವೈರಸ್ ಇರುವುದು ದೃಢಪಟ್ಟಿಲ್ಲ. ಯಾವುದೇ ರೀತಿಯ ರೋಗದ ಲಕ್ಷಣಗಳು ಕಂಡು ಬಂದಿಲ್ಲ ಎಂದು ತಿಳಿಸಿದ್ದಾರೆ.
ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ವ್ಯಕ್ತಿಗಳ ಸಂಪರ್ಕದಲ್ಲಿದ್ದವರ ಮೇಲೂ ತೀವ್ರ ನಿಗಾ ವಹಿಸಲಾಗಿದ್ದು, ಎಲ್ಲರೂ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…