ನವದೆಹಲಿ: 18ನೇ ಲೋಕಸಭೆ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಈ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನಲೆ ದೇಶದಲ್ಲಿ 75ವರ್ಷಗಳ ಲೋಕಸಭಾ ಚುನಾವಣೆಯ ಇತಿಹಾಸದಲ್ಲೇ ಈ ಬಾರಿ ಅತಿ ಹೆಚ್ಚು ದಾಖಲೆರಹಿತ ನಗದು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಯ ಚುನಾವಣಾ ಆಯೋಗ ತಿಳಿಸಿದೆ.
2024 ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ದೇಶಾದ್ಯಂತ ಇದುವರೆಗೆ 4,650 ಕೋಟಿ ರೂಪಾಯಿಗೂ ಅಧಿಕ ಮೊತ್ತದ ನಗ-ನಾಣ್ಯ, ದಾಖಲೆರಹಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಮೊತ್ತವು 2019 ರ ಲೋಕಸಭಾ ಚುನಾವಣೆಯ ಇಡೀ ಪ್ರಕ್ರಿಯೆಯಲ್ಲಿ ವಶಪಡಿಸಿಕೊಳ್ಳಲಾದ ಮೊತ್ತಕ್ಕಿಂತ 3,475 ಕೋಟಿ ರೂಪಾಯಿ ಹೆಚ್ಚಾಗಿದೆ.
ಹೀಗೆ ವಶಪಡಿಸಿಕೊಂಡದ್ದರಲ್ಲಿ ಶೇಕಡಾ 45ರಷ್ಟು ಮೊತ್ತ ಮಾದಕ ದ್ರವ್ಯಗಳು ಮತ್ತು ಮಾದಕವಸ್ತುಗಳ (ರೂ. 2,068.10 ಕೋಟಿ) ಪಾಲು ಎಂದು ಚುನಾವಣಾ ಆಯೋಗ ಹೇಳಿದೆ. ಮಾದಕ ವಸ್ತುಗಳ ಜೊತೆಗೆ ಚುನಾವಣಾ ಆಯೋಗ 395.39 ಕೋಟಿ ರೂಪಾಯಿ ನಗದು, 489.31 ಕೋಟಿ ಮೌಲ್ಯದ ಮದ್ಯ, 562.10 ಕೋಟಿ ರೂಪಾಯಿ ಮೌಲ್ಯದ ಅಮೂಲ್ಯ ಲೋಹ ಮತ್ತು 1,142.49 ಕೋಟಿ ಮೌಲ್ಯದ ಉಡುಗೊರೆಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…