ದೇಶ- ವಿದೇಶ

ಹೊಸ ದಾಖಲೆಯ ನಗ-ನಾಣ್ಯ, ಡ್ರಗ್ಸ್‌ ವಶಪಡಿಸಿಕೊಂಡು ಚುನಾವಣಾ ಆಯೋಗ

ನವದೆಹಲಿ: 18ನೇ ಲೋಕಸಭೆ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಈ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನಲೆ ದೇಶದಲ್ಲಿ 75ವರ್ಷಗಳ ಲೋಕಸಭಾ ಚುನಾವಣೆಯ ಇತಿಹಾಸದಲ್ಲೇ ಈ ಬಾರಿ ಅತಿ ಹೆಚ್ಚು ದಾಖಲೆರಹಿತ ನಗದು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಯ ಚುನಾವಣಾ ಆಯೋಗ ತಿಳಿಸಿದೆ.

2024 ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ದೇಶಾದ್ಯಂತ ಇದುವರೆಗೆ 4,650 ಕೋಟಿ ರೂಪಾಯಿಗೂ ಅಧಿಕ ಮೊತ್ತದ ನಗ-ನಾಣ್ಯ, ದಾಖಲೆರಹಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಮೊತ್ತವು 2019 ರ ಲೋಕಸಭಾ ಚುನಾವಣೆಯ ಇಡೀ ಪ್ರಕ್ರಿಯೆಯಲ್ಲಿ ವಶಪಡಿಸಿಕೊಳ್ಳಲಾದ ಮೊತ್ತಕ್ಕಿಂತ 3,475 ಕೋಟಿ ರೂಪಾಯಿ ಹೆಚ್ಚಾಗಿದೆ.

ಹೀಗೆ ವಶಪಡಿಸಿಕೊಂಡದ್ದರಲ್ಲಿ ಶೇಕಡಾ 45ರಷ್ಟು ಮೊತ್ತ ಮಾದಕ ದ್ರವ್ಯಗಳು ಮತ್ತು ಮಾದಕವಸ್ತುಗಳ (ರೂ. 2,068.10 ಕೋಟಿ) ಪಾಲು ಎಂದು ಚುನಾವಣಾ ಆಯೋಗ ಹೇಳಿದೆ. ಮಾದಕ ವಸ್ತುಗಳ ಜೊತೆಗೆ ಚುನಾವಣಾ ಆಯೋಗ 395.39 ಕೋಟಿ ರೂಪಾಯಿ ನಗದು, 489.31 ಕೋಟಿ ಮೌಲ್ಯದ ಮದ್ಯ, 562.10 ಕೋಟಿ ರೂಪಾಯಿ ಮೌಲ್ಯದ ಅಮೂಲ್ಯ ಲೋಹ ಮತ್ತು 1,142.49 ಕೋಟಿ ಮೌಲ್ಯದ ಉಡುಗೊರೆಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago