ಕೊಚ್ಚಿ: ಖಾಸಗಿ ಖನಿಜ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದ ಆರೋಪದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುತ್ರಿ ವೀಣಾ ವಿಜಯನ್‌ಗೆ ಸೇರಿದ ಐಟಿ ಕಂಪನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿಯಲ್ಲಿ ದೂರು ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ.
ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಸಮನ್ಸ್ ಹೊರಡಿಸುವ ಸಾಧ್ಯತೆಗಳಿವೆ ಎಂದೂ ಸಹ ಮೂಲಗಳು ತಿಳಿಸಿವೆ. ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಗಂಭೀರ ವಂಚನೆ ಪ್ರಕರಣಗಳ ತನಿಖಾ ವಿಭಾಗ ಸಲ್ಲಿಸಿದ ದೂರಿನಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ದೂರಿನಲ್ಲಿ 2018-19ರ ಅವಧಿಯಲ್ಲಿ ಕೊಚ್ಚಿನ್ ಮಿನರಲ್ಸ್ ಹಾಗೂ ರುಟೈಲ್ ಲಿಮಿಟೆಡ್ ಎಂಬ ಕಂಪನಿ ಯಾವುದೇ ಸೇವೆಯನ್ನು ಪಡೆಯದಿದ್ದರೂ ಸಹ ವೀಣಾ ಒಡೆತನದ ಎಕ್ಸ್ ಲಾಜಿಕ್ ಸೆಲ್ಯೂಷನ್‌ಗೆ 1.72 ಕೋಟಿ ರೂಪಾಯಿ ಹಣವನ್ನು ಅಕ್ರಮವಾಗಿ ಪಾವತಿಸಲಾಗಿದೆ ಎಂದು ಆರೋಪಿಸಲಾಗಿದೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…