ಹೈದರಾಬಾದ್: ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.
ರಿಯಾಲ್ಟಿ ಗ್ರೂಪ್‌ಗಳಾದ ಸುರಾನಾ ಗ್ರೂಪ್ ಹಾಗೂ ಸಾಯಿ ಸೂರ್ಯ ಡೆವಲಪರ್ಸ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟ ಮಹೇಶ್ ಬಾಬುಗೆ ಇಡಿ ನೋಟಿಸ್ ನೀಡಿದ್ದು, ಏಪ್ರಿಲ್.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಏನಿದು ಪ್ರಕರಣ?: ಎರಡು ರಿಯಲ್ ಎಸ್ಟೇಟ್ ಪ್ರಾಜೆಕ್ಟ್‌ಗಳನ್ನು ಮಹೇಶ್ ಬಾಬು ಬೆಂಬಲಿಸಿದ್ದರು. ಆದರೆ ಈ ಗ್ರೂಪ್ಸ್ ಗ್ರಾಹಕರನ್ನು ವಂಚಿಸಿದೆಯೆಂಬ ಆರೋಪವಿದೆ. ಹಾಗಾಗಿ ನಟನ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ.
ಮಹೇಶ್ ಬಾಬು ಈ ಅನುಮೋದನೆಗಳಿಗಾಗಿ 5.9 ಕೋಟಿ ರೂಗಳನ್ನು ಪಡೆದುಕೊಂಡಿದ್ದಾರೆ. ಚೆಕ್ ಮೂಲಕ 3.4 ಕೋಟಿ ರೂಪಾಯಿ ಮತ್ತು ನಗದು ಮೂಲಕ 2.5 ಕೋಟಿ ರೂಪಾಯಿ ಸ್ವೀಕರಿಸಿದ್ದಾರೆ. ಇದೀಗ ನಗದು ಪಾವತಿಗಳು ಪರಿಶೀಲನೆಗೆ ಒಳಪಟ್ಟಿವೆ.
ಈ ಹಿನ್ನೆಲೆಯಲ್ಲಿ ಏಪ್ರಿಲ್.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ್ದು, ಅಂದಿನ ದಿನ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.





