ದೇಶ- ವಿದೇಶ

ಅಕ್ರಮ ಹಣ ವರ್ಗಾವಣೆ: ಟಾಲಿವುಟ್‌ ನಟ ಮಹೇಶ್‌ ಬಾಬುಗೆ ಇಡಿ ನೋಟಿಸ್‌

ಹೈದರಾಬಾದ್:‌ ಟಾಲಿವುಡ್‌ ಸ್ಟಾರ್‌ ನಟ ಮಹೇಶ್‌ ಬಾಬು ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್‌ ಜಾರಿ ಮಾಡಿದೆ.

ರಿಯಾಲ್ಟಿ ಗ್ರೂಪ್‌ಗಳಾದ ಸುರಾನಾ ಗ್ರೂಪ್‌ ಹಾಗೂ ಸಾಯಿ ಸೂರ್ಯ ಡೆವಲಪರ್ಸ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟ ಮಹೇಶ್‌ ಬಾಬುಗೆ ಇಡಿ ನೋಟಿಸ್‌ ನೀಡಿದ್ದು, ಏಪ್ರಿಲ್.‌27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಏನಿದು ಪ್ರಕರಣ?: ಎರಡು ರಿಯಲ್‌ ಎಸ್ಟೇಟ್‌ ಪ್ರಾಜೆಕ್ಟ್‌ಗಳನ್ನು ಮಹೇಶ್‌ ಬಾಬು ಬೆಂಬಲಿಸಿದ್ದರು. ಆದರೆ ಈ ಗ್ರೂಪ್ಸ್‌ ಗ್ರಾಹಕರನ್ನು ವಂಚಿಸಿದೆಯೆಂಬ ಆರೋಪವಿದೆ. ಹಾಗಾಗಿ ನಟನ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್‌ ನೀಡಲಾಗಿದೆ.

ಮಹೇಶ್‌ ಬಾಬು ಈ ಅನುಮೋದನೆಗಳಿಗಾಗಿ 5.9 ಕೋಟಿ ರೂಗಳನ್ನು ಪಡೆದುಕೊಂಡಿದ್ದಾರೆ. ಚೆಕ್‌ ಮೂಲಕ 3.4 ಕೋಟಿ ರೂಪಾಯಿ ಮತ್ತು ನಗದು ಮೂಲಕ 2.5 ಕೋಟಿ ರೂಪಾಯಿ ಸ್ವೀಕರಿಸಿದ್ದಾರೆ. ಇದೀಗ ನಗದು ಪಾವತಿಗಳು ಪರಿಶೀಲನೆಗೆ ಒಳಪಟ್ಟಿವೆ.

ಈ ಹಿನ್ನೆಲೆಯಲ್ಲಿ ಏಪ್ರಿಲ್.‌27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಿದ್ದು, ಅಂದಿನ ದಿನ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

4 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

4 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

4 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

4 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

4 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

4 hours ago