ನವದೆಹಲಿ: ಆನ್‌ಲೈನ್ ಗೇಮಿಂಗ್ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಅನೇಕ ಆನ್‌ಲೈನ್ ಗೇಮಿಂಗ್ ಕಂಪನಿಗಳ ಮೇಲೆ ದಾಳಿ ನಡೆಸಲಾಗಿದ್ದು, ಬೆಂಗಳೂರು, ದೆಹಲಿ, ಗುರುಗ್ರಾಮ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿ: ರಾಜ್ಯದಲ್ಲಿ ಆನ್‌ಲೈನ್ ಗೇಮ್‌ಗೆ ಕಡಿವಾಣ ಪಕ್ಕಾ: ವಿಧಾನಸಭೆಯಲ್ಲಿ ಗಂಭೀರ ಚರ್ಚೆ
ಆನ್‌ಲೈನ್ ಗೇಮಿಂಗ್ ಕಂಪನಿಗಳ ಕಾರ್ಪೋರೇಟ್ ಕಚೇರಿ, ಸಿಇಓ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಅಧಿಕಾರಿಗಳ ತಪಾಸಣೆ ವೇಳೆ ಅಕ್ರಮ ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ.
ಈ ಮೂಲಕ ಇಡಿ ಇಂಚಿಂಚೂ ಬಿಡದೇ ಪರಿಶೀಲನೆ ನಡೆಸಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.




