ಹೊಸದಿಲ್ಲಿ : ರಿಲಯನ್ಸ್ ಗ್ರೂಪ್ ಮುಖ್ಯಸ್ಥ ಅನಿಲ್ ಅಂಬಾನಿ ಒಡೆತನದ ಸಮೂಹ ಸಂಸ್ಥೆಗಳ ವಿರುದ್ಧ ಕೇಳಿ ಬಂದಿದ್ದ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತು ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 3 ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಅನಿಲ್ ಅಂಬಾನಿಗೆ ಸೇರಿದ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಇಡಿ ನಾಲ್ಕು ತಾತ್ಕಾಲಿಕ ಆದೇಶಗಳನ್ನು ಹೊರಡಿಸಿದೆ ಎಂದು ಹೇಳಲಾಗಿದೆ. ಈ ಆಸ್ತಿಗಳ ಪೈಕಿ ಮುಂಬೈನ ಪಾಲಿ ಹಿಲ್ ನಲ್ಲಿರುವ ಅನಿಲ್ ಅಂಬಾನಿಯ ನಿವಾಸ ಹಾಗೂ ಅವರ ಒಡೆತನದ ಸಮೂಹ ಸಂಸ್ಥೆಗಳಿಗೆ ಸಂಬಂಧಿಸಿದ ಇನ್ನಿತರ ವಸತಿ ಹಾಗೂ ವಾಣಿಜ್ಯ ಆಸ್ತಿಗಳು ಸೇರಿವೆ ಎನ್ನಲಾಗಿದೆ.
ಇದನ್ನೂ ಓದಿ:-ಸಿ.ಟಿ ರವಿ ವಿರುದ್ಧ ಜಾತಿ ನಿಂದನೆ ದೂರು ದಾಖಲಿಸಿದ ಲಕ್ಷ್ಮಣ್
ದೆಹಲಿಯ ಮಹಾರಾಜ ರಂಜಿತ್ ಸಿಂಗ್ ಮಾರ್ಗದಲ್ಲಿರುವ ರಿಲಯನ್ಸ್ ಸೆಂಟರ್‌ಗೆ ಸಂಬಂಧಿಸಿದ ಜಮೀನು, ದಿಲ್ಲಿ, ನೋಯ್ಡಾ, ಘಾಝಿಯಾಬಾದ್, ಮುಂಬೈ, ಪುಣೆ, ಥಾಣೆ, ಹೈದರಾಬಾದ್, ಚೆನ್ನೈ ಹಾಗೂ ಪೂರ್ವ ಗೋದಾವರಿ ನಗರಗಳಲ್ಲಿರುವ ಇನ್ನಿತರ ಆಸ್ತಿಪಾಸ್ತಿಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಎಲ್ಲಾ ಆಸ್ತಿಯ ಒಟ್ಟು ಮೌಲ್ಯ 3,084 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
2017 ಮತ್ತು 2019ರ ನಡುವೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಅಡಿಯಲ್ಲಿರುವ ಸಂಸ್ಥೆಗಳಿಗೆ ಯೆಸ್ ಬ್ಯಾಂಕ್ 3,000 ಕೋಟಿ ರೂ. ಸಾಲ ನೀಡಿತ್ತು. ಆದರೆ ಈ ಸಾಲದ ಹಣವನ್ನ ಗ್ರೂಪ್‌ನ ಇತರ ಶೆಲ್ ಕಂಪನಿಗಳಿಗೆ (ಬೇನಾಮಿ ಕಂಪನಿ) ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಮೂಲಕ ಬ್ಯಾಂಕ್‌ಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನ ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಇಡಿ ಆರೋಪಿಸಿದೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…