ನವದೆಹಲಿ: ಕೇಂದ್ರ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ.
ಇಂದು ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬಜೆಟ್ ಮಂಡಿಸಿದ್ದಾರೆ.
ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭಾರೀ ಕೊಡುಗೆ ನೀಡಿದ್ದು, ಒಂದು ಲಕ್ಷ ವಿದ್ಯಾರ್ಥಿಗಳಿಗೆ ಇ-ವೋಚರ್ ನೀಡುವ ಯೋಜನೆಗೆ ಬಗ್ಗೆ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಇದರಿಂದ ಶೈಕ್ಷಣಿಕ ಸಾಲದ ಬಡ್ಡಿ ಪಾವತಿಗೆ ಇ-ವೋಚರ್ ಯೋಜನೆ ತುಂಬಾ ಅನುಕೂಲವಾಗಲಿದೆ.
ಇದರ ಜೊತೆಗೆ 20 ಲಕ್ಷ ಯುವಕರಿಗೆ ಕೌಶಲ್ಯಾಭಿವೃದ್ಧಿ ಯೋಜನೆ ಜಾರಿಗೆ ಬರಲಿದ್ದು, ಉನ್ನತ ಶಿಕ್ಷಣಕ್ಕೆ 10 ಲಕ್ಷದವರೆಗೂ ವಿದ್ಯಾರ್ಥಿಗಳು ಲೋನ್ ತೆಗೆದುಕೊಳ್ಳಬಹುದಾಗಿದೆ.
ಇನ್ನೂ ಉದ್ಯೋಗ ಸೃಷ್ಟಿಗೆ ಮೂರು ಯೋಜನೆ ಜಾರಿ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದ್ದು, 30 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಬಗ್ಗೆ ಬಂಪರ್ ಘೋಷಣೆ ಮಾಡಲಾಗಿದೆ. ಇದಕ್ಕಾಗಿಯೇ 1.48 ಲಕ್ಷ ಹಣವನ್ನು ಮೀಸಲಿಡಲಾಗಿದೆ.
ಯುವಕರಿಗೆ 4 ವರ್ಷ ಆರ್ಥಿಕ ನೆರವು ನೀಡಲಾಗಿದ್ದು, ವಿದ್ಯಾರ್ಥಿಗಳ ಏಳಿಗೆಗಾಗಿ ಹಲವು ಕೊಡುಗೆ ನೀಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ.





