ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿದ್ದು, ಭಾರತದಲ್ಲಿ ಎಲ್‌ಪಿಜಿ ಬಳಕೆ 13% ರಷ್ಟು ಕುಸಿತ ಕಂಡಿದೆ.
ಭಾರತದಲ್ಲಿ ಮಾರ್ಚ್‌ನಲ್ಲಿ ಎಲ್‌ಪಿಜಿ ಬಳಕೆ ಶೇ.13ರಷ್ಟು ಕುಸಿತವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಎಲ್‌ಪಿಜಿ 2.729 ದಶಲಕ್ಷ ಟನ್ ಬಳಕೆಯಾಗಿತ್ತು. ಆದರೆ ಈ ವರ್ಷದ ಮಾರ್ಚ್‌ನಲ್ಲಿ 2.379 ದಶಲಕ್ಷ ಟನ್ ಬಳಕೆಯಾಗಿದೆ.
ಹಾರ್ಮುಜ್ ಜಲಸಂಧಿ ಮೂಲಕವೇ ಬರಬೇಕಿದ್ದ ಎಲ್‌ಪಿಜಿ, ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್‌ಪಿಜಿ ಪೂರೈಕೆಯಲ್ಲಿ ನಿರಂತರ ವ್ಯತ್ಯಯವಾಗುತ್ತಿದೆ.





