Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌ಎಸ್‌ಎಸ್‌ಎಐ) ಶನಿವಾರ ಹೇಳಿದೆ.

ದೇಶದಲ್ಲಿರುವ ಮೊಟ್ಟೆಗಳು ಮಾನವನ ಸೇವೆನೆಗೆ ಸುರಕ್ಷಿತವಾಗಿವೆ. ಮೊಟ್ಟೆಗಳಲ್ಲಿ ಕ್ಯಾನ್ಸರ್ಗೆ ಕಾರಕವಾಗುವ ಅಂಶಗಳಿವೆ ಎಂದು ಆರೋಪಿಸುವ ವರದಿಗಳು ವೈಜ್ಞಾನಿಕ ಆಧಾರವನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ. ವರದಿಗಳು ಜನರನ್ನು ತಪ್ಪು ದಾರಿಗೆ ಎಳೆಯುವುದಲ್ಲದೆ, ಅನಗತ್ಯವಾಗಿ ಆತಂಕವನ್ನು ಸೃಷ್ಟಿ ಮಾಡಿದೆ ಎಂದು ಹೇಳಿದೆ.

ಇದನ್ನೂ ಓದಿ:-‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಮೆಟಾಬಾಲೈಟ್ ಅಂಶ ಪತ್ತೆಯಾಗಿದೆ. ಇದು ಕ್ಯಾನ್ಸರ್ಗೆ ಕಾರಣವಾಗುತ್ತದೆ ಎಂದುಸಾಮಾಜಿಕ ಮಾಧ್ಯಮಗಳಲ್ಲಿ ವರದಿಗಳು ಹರಿದಾಡಿದ್ದವು. ಇದಕ್ಕೆ ಸ್ಪಷ್ಟೀಕರಣ ನೀಡಿದ ಎಫ್‌ಎಸ್‌ಎಸ್‌ಎಐ, ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಕಾರ, ಕೋಳಿ ಸಾಕಾಣಿಕೆ ಮತ್ತು ಮೊಟ್ಟೆ ಉತ್ಪಾದನೆಯಎಲ್ಲ ಹಂತದಲ್ಲಿ ನೈಟ್ರೋಫ್ಯೂರಾನ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ. ಯಾವುದೇ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಆರೋಗ್ಯ ಸಂಸ್ಥೆಯು ಮೊಟ್ಟೆ ಸೇವನೆಯು ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ಹೇಳಿಲ್ಲ ಎಂದುಎಫ್‌ಎಸ್‌ಎಸ್‌ಎಐ ತಿಳಿಸಿದೆ.

Tags:
error: Content is protected !!