Mysore
20
overcast clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್‌ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ.

ಜೂನ್.‌18ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ.

ಜೂನ್.‌8ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಜೂನ್.‌9ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್.‌11ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.

ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಮೂರು ಮತ್ತು ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ.

Tags:
error: Content is protected !!