ದೇಶ- ವಿದೇಶ

ಸಂಸತ್‌ನಲ್ಲಿ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ: ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸಂಸತ್‌ನಲ್ಲಿ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಮತದಾನ ಮಾಡಿದ್ದಾರೆ.

ಜಗದೀಪ್‌ ಧನಕರ್‌ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಲೋಕಸಭೆ, ರಾಜ್ಯಸಭೆ ಬಲಾಬಲ ಗಮನಿಸಿ ವಿಪಕ್ಷದ ಸುದರ್ಶನ್‌ ರೆಡ್ಡಿ ವಿರುದ್ಧ ಎನ್‌ಡಿಎ ಅಭ್ಯರ್ಥಿ ರಾಧಾಕೃಷ್ಣನ್‌ ಆಯ್ಕೆಯಾಗುವುದು ಖಚಿತವಾಗಿದೆ.

ಲೋಕಸಭೆಯ 543, ರಾಜ್ಯಸಭೆಯ 245 ಸದಸ್ಯರು ಸೇರಿ 788 ಸಂಸದರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಇವರನ್ನು ಎಲೆಕ್ಟ್ರೋರಲ್‌ ಕಾಲೇಜ್‌ ಎಂದು ಕರೆಯಲಾಗುತ್ತದೆ. ಪ್ರಸ್ತುತ ಲೋಕಸಭೆಯಲ್ಲಿ ಒಂದು ರಾಜ್ಯಸಭೆಯಲ್ಲಿ ಆರು ಸ್ಥಾನ ಖಾಲಿಯಿದ್ದು, 781 ಸಂಸದರು ಮತ ಚಲಾಯಿಸಲಿದ್ದಾರೆ.

ಚುನಾವಣೆಯಲ್ಲಿ ಮತಪತ್ರದ ಮೂಲಕ ಮತದಾನ ನಡೆಯುತ್ತದೆ. ಗೌಪ್ಯ ಮತದಾನ ನಡೆಯಲಿದ್ದು, ಸಂಸದರು ಯಾವ ಅಭ್ಯರ್ಥಿಗೆ ಬೇಕಾದರೂ ಮತ ಹಾಕಬಹುದು. ಆಡಳಿತ ಹಾಗೂ ವಿಪಕ್ಷದಿಂದ ಆಯ್ಕೆಯಾದ ಅಭ್ಯರ್ಥಿಗಳ ಪೈಕಿ ಸರಳ ಬಹುಮತ ಪಡೆದವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಲಿದ್ದಾರೆ.

ವಿಜೇತರಾಗಲು ಕನಿಷ್ಠ 391 ಮತಗಳ ಅಗತ್ಯವಿದೆ. ಇಂದೇ ಮತ ಎಣಿಕೆ ನಡೆದು ವಿಜೇತರ ಘೋಷಣೆಯಾಗಲಿದೆ. ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್‌, ಇಂಡಿಯಾ ಕೂಟದ ಅಭ್ಯರ್ಥಿಯಾಗಿ ಸುದರ್ಶನ್‌ ರೆಡ್ಡಿ ಸ್ಪರ್ಧಿಸಿದ್ದು, ಇಂದೇ ಫಲಿತಾಂಶ ಪ್ರಕಟವಾಗಲಿದೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

3 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

4 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

5 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

8 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

9 hours ago