ದೇಶ- ವಿದೇಶ

ಮಾರ್ಚ್.‌10ರ ಬಳಿಕ ಐದು ರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟ.?

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು ತಯಾರಿ ನಡೆಸಿದೆ.

ಬಲ್ಲ ಮೂಲಗಳ ಪ್ರಕಾರ ಮಾರ್ಚ್.‌10ರ ಬಳಿಕ ಯಾವಾಗಲಾದರೂ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಲಿದೆ.

ಕೇರಳ, ತಮಿಳುನಾಡು, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪುಚುಚೇರಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಬೇಕಿದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ನೇತೃತ್ವದ ತಂಡ ಈಗಾಗಲೇ ಮೂರು ರಾಜ್ಯಗಳಿಗೆ ಭೇಟಿ ನೀಡಿದೆ. ಮಾರ್ಚ್.‌6, 7ರಂದು ಕೇರಳ, ಮಾರ್ಚ್.‌9ರಂದು ಪಶ್ಚಿಮ ಬಂಗಾಳಕ್ಕೆ ತಂಡ ಭೇಟಿ ನೀಡಲಿದೆ.

ಈ ಚುನಾವಣೆ ಘೋಷಣೆ ನಡುವೆಯೇ ಕರ್ನಾಟಕದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡುವ ನಿರೀಕ್ಷೆ ಇದೆ.

 

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago