Elections will be held under my leadership in 2028 too: CM
ಹೊಸದಿಲ್ಲಿ : ಮುಂಬರುವ 2028ರಲ್ಲೂ ನನ್ನ ನೇತೃತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ ವಿಷಯಕ್ಕೆ ತೆರೆ ಎಳೆದಿದ್ದಾರೆ.
ಗುರುವಾರ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕರ್ನಾಟಕದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ಪುನರುಚ್ಚರಿಸಿದ್ದೇವೆ ಎಂದರು.
ಕರ್ನಾಟಕದ ಮುಖ್ಯಮಂತ್ರಿ ನಾನೇ. ಡಿ.ಕೆ.ಶಿವಕುಮಾರ್ ಆಗಲಿ ಅಥವಾ ಶಾಸಕರು ಯಾರೇ ಆಗಲಿ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇಟ್ಟುಕೊಂಡಿದ್ದರೆ ಅದರಲ್ಲ ತಪ್ಪೇನಿಲ್ಲ ಎಂದರು.
ಸಚಿವ ಸಂಪುಟ ಪುನರ್ರಚನೆ ಬಗ್ಗೆ ಚರ್ಚೆಯಿಲ್ಲ:- ಸಚಿವ ಸಂಪುಟ ಪುನರ್ರಚನೆ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡುತ್ತಾ, ಸಚಿವ ಸಂಪುಟ ಪುನರ್ರಚನೆ ಬಗ್ಗೆ ಯಾವುದೇ ಚರ್ಚೆಯಾಗುವುದಿಲ್ಲ ಎಂದರು.
ಜನೌಷಧಿ ಕೇಂದ್ರ ಬಂದ್-ಮಾಹಿತಿ ಪಡೆದು ಪ್ರತಿಕ್ರಿಯೆ:- ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಜನೌಷಧಿ ಕೇಂದ್ರ ಬಂದ್ ಮಾಡಿರುವ ಆದೇಶಕ್ಕೆ ಹೈಕೋರ್ಟ್ ತಡೆನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡಲಾಗುವುದು ಎಂದರು.
ಸಚಿವಸಂಪುಟದಲ್ಲಿ ಚರ್ಚೆಯಾಗಿಲ್ಲ:- ಸಿಬಿಎಸ್ ಸಿ ಕನ್ನಡ ಪತ್ರಿಕೆಯನ್ನು 125 ಅಂಕಗಳಿಂದ 100 ಕ್ಕೆ ಇಳಿಸುವ ಪ್ರಸ್ತಾಪ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಸಚಿವ ಸಂಪುಟದಲ್ಲಿ ಮಂಡನೆಯಾಗಲೀ, ಚರ್ಚೆಯಾಗಲೀ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಸರ್ಕಾರ ಗ್ಯಾರಂಟಿ ಯೋಜನೆಗಳು ಸಮಾಜದ ಬಡವರ ಪರಿಸ್ಥಿತಿಯನ್ನು ಉತ್ತಮಪಡಿಸಿದೆ:- ರಂಭಾಪುರಿ ಮಠದ ಸ್ವಾಮೀಜಿಗಳು ಗ್ಯಾರಂಟಿ ಯೋಜನೆಗಳಿಂದಾಗಿ ಜನ ಸೋಮಾರಿಗಳಾಗಿದ್ದಾರೆ ಎಂದು ಹೇಳೀಕೆ ನೀಡಿರುವ ಬಗ್ಗೆ ಮಾತನಾಡಿ ಯಾವ ಹಿನ್ನೆಲೆ ಅಥವಾ ಸಂದರ್ಭದಲ್ಲಿ ಸ್ವಾಮೀಜಿಗಳು ಈ ರೀತಿ ಹೇಳಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ಹೆಣ್ಣುಮಕ್ಕಳು ಶಕ್ತಿ ಯೋಜನೆಯಡಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡಿದರೆ ಸೋಮಾರಿಗಳಾಗುತ್ತಾರೆಯೇ ಎಂದು ಪ್ರಶ್ನಿಸಿದರು. ಕರ್ನಾಟಕದಲ್ಲಿ 7 ಕೋಟಿ ಜನರಿದ್ದು ಅದರ ಅರ್ಧ ಭಾಗವಿರುವ 3.5 ಕೋಟಿ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣಿಸಿದರೆ ಹಣ ಉಳಿತಾಯವಾಗುತ್ತದೆ. ಅವರ ಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ. ಗೃಹಲಕ್ಷ್ಮಿ ಯೋಜನೆಯಡಿ 2000 ರೂ.ಗಳನ್ನು ಒದಗಿಸಿದರೆ ಅವರು ಮಕ್ಕಳನ್ನು ಓದಿಸುತ್ತಾರೆ ಎಂದರು.
ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ದೊರೆತಿರುವ ಸ್ವಾತಂತ್ರ್ಯ ಸಾರ್ಥಕವಾಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು ಎಂದಿದ್ದರು. ಅವರು ಮೇಧಾವಿಗಳಾಗಿದ್ದು, ಅವರು ಹೇಳಿದ್ದನ್ನು ಅಲ್ಲಗಳೆಯಲಾಗುವುದಿಲ್ಲ. ಜಾತಿ ಹೋಗಬೇಕಾದರೆ ಆರ್ಥಿಕವಾಗಿ ಸಬಲರಾಗಲು, ಸಮಾನತೆ ತರಲು ಸಮಾಜಿಕ ಆರ್ಥಿಕ ಶಕ್ತಿ ದೊರಕಬೇಕು ಎಂದರು. ದೇಶ ಕಂಡ ಮೇಧಾವಿಗಳಲ್ಲಿ ಅಪ್ರತಿಮ ಮೇಧಾವಿಗಳಾದ ಅಂಬೇಡ್ಕರ್ ಅವರು ದೇಶದಲ್ಲಿನ ಅಸಮಾನತೆ ಹೋಗದೇಹೋದರೆ ಪ್ರಜಾಪ್ರಭುತ್ವ ಯಶಸ್ವಿಯಾಗುವುದಿಲ್ಲ. ಸಮಸಮಾಜದ ನಿರ್ಮಾಣಕ್ಕೆ ಜಾತೀಯತೆ, ವರ್ಗ ವ್ಯವಸ್ಥೆ ಹೋಗಬೇಕು ಎಂದಿದ್ದಾರೆ. ಸರ್ಕಾರ ಗ್ಯಾರಂಟಿ ಯೋಜನೆಗಳು ಸಮಾಜದ ಬಡವರ ಪರಿಸ್ಥಿತಿಯನ್ನು ಉತ್ತಮಪಡಿಸಬಹುದು ಎಂದು ಸಾಕಷ್ಟು ಚರ್ಚೆಯ ನಂತರ ನಿರ್ಣಯ ಮಾಡಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಮಹಾದೇಶ್ ಎಂ ಗೌಡ ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…