ದೇಶ- ವಿದೇಶ

ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿ ಬಗೆಗಿನ ಪಾಠ: ಸಿಎಂ ಮೋಹನ್‌ ಯಾದವ್‌

ಮಧ್ಯಪ್ರದೇಶ: 1975ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ಇನ್ಮುಂದೆ ಶಾಲಾ ಪಠ್ಯಕ್ರಮದಲ್ಲಿ ಅಧ್ಯಾಯವೊಂದನ್ನು ಅಳವಡಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರು ಹೇಳಿದ್ದಾರೆ.

ಬುಧವಾರ (ಜೂನ್‌.26) ಭೋಪಾಲ್‌ನಲ್ಲಿರುವ ಸಿಎಂ ಸಿವಾಸದಲ್ಲಿ ಲೋಕತಂತ್ರ ಸೇನಾನಿ ಸಮ್ಮಾನ್‌ ಸಮಾರಂಭದಲ್ಲಿ ಜನರು ಸರ್ಕಾರದ ವಿರುದ್ಧ ಮಾಡಿದ ಪ್ರತಿಭಟನೆಗಳು, ಹೋರಾಟಗಳನ್ನು ಸ್ಮರಿಸಿದರು.

ಸ್ವಾತಂತ್ರ್ಯ ಬಂದ ಕೆಲವೇ ವರ್ಷಗಳಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಹೋರಾಟಗಾರರ ಫಲದಿಂದಾಗಿ ಇಂದು ದೇಶ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮಾರ್ಪಟ್ಟಿದೆ ಎಂದರು.

ಪ್ರಜಾಪ್ರಭುತ್ವ ಹೋರಾಟಗಾರರಿಗೆ ಸರ್ಕಾರಿ ಗೃಹಗಳಲ್ಲಿ ಶೇ.50 ರಷ್ಟು ವಿನಾಯಿತಿ ದರದಲ್ಲಿ ತಂಗಲು ಅವಕಾಶ, ಹೆದ್ದಾರಿಯಲ್ಲಿ ಟೋಲ್‌ ಪಾವತಿಸುವಲ್ಲಿ ವಿನಾಯಿತಿ ಹಾಗೂ ಆಯುಷ್ಮಾನ್‌ ಕಾರ್ಡ್‌ ಹೊಂದಿರುವವರಿಗೆ ಚಿಕಿತ್ಸಾ ವೆಚ್ಚ ಭರಿಸಲು ವಿಳಂಬ ಮಾಡುವುದಿಲ್ಲ ಎಂದು ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು ರೈಲ್ವೆ ವೇಳಾ ಪಟ್ಟಿಯಲ್ಲಿ ನೂತನ ಪರಿಷ್ಕರಣೆ: 2025ರ ಜನವರಿ 1 ರಿಂದ ಜಾರಿ

ಮೈಸೂರು: ಭಾರತೀಯ ರೈಲ್ವೆ ಇಲಾಖೆಯೂ ಹೊಸ ವರ್ಷದ ಆರಂಭದ ಬೆನ್ನಲ್ಲೇ, ತನ್ನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಮೈಸೂರಿನಿಂದ ಇತರ ನಿಲ್ದಾಣಗಳಿಗೆ…

2 hours ago

ಹೊಸ ವರ್ಷಾಚರಣೆಗೆ ಪೋಲಿಸರ ಕಣ್ಗಾವಲು: ಸೀಮಾ ಲಾಟ್ಕರ್‌

ಮೈಸೂರು: ಸಾಂಸಕೃತಿಕ ನಗರಿ ಮೈಸೂರು ನಗರದಾದ್ಯಂತ ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಬಿಗಿ…

2 hours ago

ನೀವು ಗೃಹ ಸಚಿವರೋ ಬೆನ್ನಿಗೆ ನಿಲ್ಲುವ ಗ್ರಹ ಸಚಿವರೋ? : ಬಿಜೆಪಿ ವ್ಯಂಗ್ಯ

ಬೆಂಗಳೂರು: ಕಲಬುರ್ಗಿಯ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಗಾಂಧಿ ಪರವಾಗಿ ಬೆನ್ನಿಗೆ ನಿಂತಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌…

3 hours ago

ರಾಜ್ಯ ಸರ್ಕಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ದೂರು ನೀಡಿದ ಸಿ.ಟಿ.ರವಿ

ಮೈಸೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಮಧ್ಯೆ ಜಟಾಪಟಿ ಇದೀಗ ರಾಜ್ಯಪಾಲರ ಭವನಕ್ಕೆ ತಲುಪಿದ್ದು,…

3 hours ago

ಕನ್ನಡದ ಅಸ್ಮಿತೆಗೆ ಬದ್ಧರಾಗಿದೆಂದು ಹೇಳಿಕೊಳ್ಳುವ ಸರ್ಕಾರ ಮತ್ತೊಮ್ಮೆ ಕೆಎಎಸ್‌ ಮರು ಪರೀಕ್ಷೆಯಲ್ಲಿ ಎಡವಟ್ಟು: ಸಂಸದ ಯದುವೀರ್‌ ವಾಗ್ದಾಳಿ

ಮೈಸೂರು: ಕನ್ನಡದ ಅಸ್ಮಿತೆ ಎಂದು ಹೇಳಿಕೊಳ್ಳುವವ ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯ ಮತ್ತು ಬೇಜವಾಬ್ದಾರಿತನದಿಂದಾಗಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಗೊಂದಲಕ್ಕೊಳಗಾಗುತ್ತಿರುವುದು ವಿಷಾದನೀಯ…

4 hours ago

ಬಿ.ವೈ. ವಿಜಯೇಂದ್ರರವರಿಗೆ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ಡಾಲಿ ಧನಂಜಯ್‌ ದಾಂಪತ್ಯ ಜೀವನಕ್ಕೆ ಕಾಲೀಡುತ್ತಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ…

4 hours ago