Mysore
24
mist

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಭಾರತಕ್ಕೆ ಕಾಲಿಟ್ಟ ಎಂಪಾಕ್ಸ್‌ ಸೋಂಕು : ವಿದೇಶದಿಂದ ಬಂದ ವ್ಯಕ್ತಿಗೆ ಸೋಂಕು ಧೃಢ

ನವದೆಹಲಿ: ಆಫ್ರಿಕಾ ದೇಶಗಳಲ್ಲಿ ಇತ್ತೀಚೆಗೆ ತೀವ್ರವಾಗಿ ಆತಂಕ ಸೃಷ್ಟಿ ಮಾಡಿರುವ ಮಂಗನ ಸಿಡುಬು (ಎಂಪಾಕ್ಸ್) ಸೋಂಕು ಭಾರತಕ್ಕೂ ಕಾಲಿಟ್ಟಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಇತ್ತೀಚೆಗೆ ವಿದೇಶದಲ್ಲಿ ಪ್ರಯಾಣ ಮಾಡಿ ಭಾರತಕ್ಕೆ ಬಂದಿದ್ದ ವ್ಯಕ್ತಿಗೆ ಎಂಪಾಕ್ಸ್‌ ಸೋಂಕು ತಗಲಿರುವುದು ದೃಢಪಟ್ಟಿದೆ ಎಂದು ಅದು ಹೇಳಿದೆ.

ಶಂಕಿತನಿಗೆ ಎಂಪಾಕ್ಸ್‌ ಪ್ರಕರಣ ದೃಢಪಟ್ಟಿದ್ದು, ಪ್ರಯೋಗಾಲಯದ ಪರೀಕ್ಷೆಯು ರೋಗಿಯಲ್ಲಿ ಪಶ್ಚಿಮ ಆಫ್ರಿಕಾದ ಕ್ಲಾಡ್‌2 ಎಂಪಾಕ್ಸ್‌ ವೈರಸ್‌ ಇರುವಿಕೆಯನ್ನು ದೃಢಪಡಿಸಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಎಂಪಾಕ್ಸ್‌ ಸೋಂಕಿಗೆ ಒಳಗಾದ ವ್ಯಕ್ತಿ ಪ್ರಸ್ತುತ ಸ್ಥಿರ ಸ್ಥಿತಿಯಲ್ಲಿದ್ದಾರೆ. ಅವರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ ಎಂದು ಹೇಳಿದೆ.

ಸೋಮವಾರ ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಜಾಗತಿಕ ಎಂಪಾಕ್ಸ್‌ ಸೋಂಕು ಹರಡುವಿಕಡ ಕುರಿತು ಸಲಹೆಯನ್ನು ನೀಡಿದ್ದು, ಎಲ್ಲಾ ಅಧಿಕಾರಿಗಳು ಸರಿಯಾದ ಮುನ್ನೆಚ್ಚರಿಕೆಗಳನು ಕಾಪಾಡಿಕೊಳ್ಳಲು ಮತ್ತು ಸೋಂಕಿನ ಲಕ್ಷಣಗಳ ತಡೆಗಟ್ಟುವಿಕೆಯ ಬಗ್ಗೆ ವ್ಯಾಪಕ ಪ್ರಚಾರ ಮಾಡಲು ಒತ್ತಾಯಿಸಿದೆ.

ಆಫ್ರಿಕಾದ ಕಾಂಗೋ ಸೇರಿದಂತೆ 13 ದೇಶಗಳಲ್ಲಿ ಎಂಪಾಕ್ಸ್‌ ಸೋಂಕು ವೇಗವಾಗಿ ಹರಡುತ್ತಿರುವುದರಿಂದ ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ.

 

 

Tags: