ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ.
ಸಂಸತ್ ಕಲಾಪದಲ್ಲಿ ನಡೆದ ಕಲಾಪದ ಚರ್ಚೆಯಲ್ಲಿ ಮಾತನಾಡಿದ ಯದುವೀರ್ ಒಡೆಯರ್ ಅವರು, ಮೈಸೂರು ಸೇರಿದಂತೆ ಭಾರತದ ಪಾರಂಪರಿಕ ನಗರಗಳು ಈಗ ಸಾಕಷ್ಟು ಆತಂಕ ಎದುರಿಸುತ್ತಿವೆ. ಅನಿಯಂತ್ರಿತ, ಅವೈಜ್ಞಾನಿಕ ನಗರೀಕರಣದಿಂದ ಸಮಸ್ಯೆ ಎದುರಾಗಿದೆ ಎಂದು ಹೇಳಿದರು.
ಈ ಮೂಲಕ ಪಾರಂಪರಿಕತೆ ಬೆಳೆಸಲು ಸೂಕ್ತವಾಗಿ ಕಾನೂನು ಚೌಕಟ್ಟು, ನೀತಿ ರೂಪಿಸಲು ನಗರಾಭಿವೃದ್ಧಿ ಸಚಿವಾಲಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಖಾಸಗಿ ಪಾಲುದಾರಿಕೆಯಲ್ಲಿ ಪರಿಣಾಮಕಾರಿ ಪಾರಂಪರಿಕ ಸಂರಕ್ಷಣೆ, ಡಿಜಿಟಲ್ ಮ್ಯಾಪಿಂಗ್, ನಗರ ವಸಾಹತು, ನಾಗರಿಕತೆ ಸಂರಕ್ಷಣೆ ಮಾಡಬೇಕಿದೆ. ನಮ್ಮ ಸಂಸ್ಕೃತಿ, ಸ್ಮರಣೆ, ಭಂಡಾರಗಳನ್ನು ರಕ್ಷಿಸಬೇಕಾದ ಅಗತ್ಯವಿದೆ ಎಂದು ಆಗ್ರಹಿಸಿದರು.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…