ದೇಶ- ವಿದೇಶ

ಛತ್ತೀಸ್‌ಗಢದಲ್ಲಿ12 ನಕ್ಸಲರ ಹತ್ಯೆ: ಮುಂದುವರಿದ ಕಾರ್ಯಾಚರಣೆ

ಛತ್ತೀಸ್‌ಗಢ: ಇಲ್ಲಿನ ಬಿಜಾಪುರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 12 ಮಂದಿ ಹತರಾಗಿದ್ದಾರೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾಹಿತಿ ಪ್ರಕಾರ 12 ಮಂದಿ ನಕ್ಸಲರು ಸಾವನ್ನಪ್ಪಿದ್ದು, ಹಲವು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅರಣ್ಯ ಪ್ರದೇಶದಲ್ಲಿ ಇನ್ನೂ ಹಲವರು ಅಡಗಿರುವ ಶಂಕೆ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಎಲ್ಲೆಡೆ ಪೊಲೀಸರು ಕೂಡ ಕಟ್ಟೆಚ್ಚರ ವಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಎನ್‌ಕೌಂಟರ್‌ ನಡೆಯುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಎಲ್ಲಾ ಬಸ್‌ ನಿಲ್ದಾಣಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದು, ಅನುಮಾನಾಸ್ಪದ ವ್ಯಕ್ತಿಗಳು ಕಂಡರೆ ಮಾಹಿತಿ ನೀಡುವಂತೆ ಸ್ಥಳೀಯರಿಗೆ ಸೂಚನೆ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

2 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

2 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

2 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago