ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 16 ಮಂದಿ ನಕ್ಸಲರು ಮೃತರಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಠಾಣೆ ವ್ಯಾಪ್ತಿಯಲ್ಲಿ ಇರುವ ಅರಣ್ಯದೊಳಗೆ ಬೆಳಗಿನ ಜಾವ ಗುಂಡಿನ ಚಕಮಕಿ ನಡೆದಿದೆ.
ಕರ್ನಾಪಾಲ್ ಪ್ರದೇಶದಲ್ಲಿ ನಕ್ಸಲರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ 16 ಮಂದಿ ನಕ್ಸಲರು ಸಾವನ್ನಪ್ಪಿದ್ದು, ಕಾರ್ಯಾಚರಣೆ ಮುಂದುವರಿದಿದೆ.
ಈ ಹಿನ್ನೆಲೆಯಲ್ಲಿ ಛತ್ತೀಸ್‌ಗಢದ ರೈಲು ನಿಲ್ದಾಣಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.