ದೇಶ- ವಿದೇಶ

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್:‌ 16 ನಕ್ಸಲರ ಹತ್ಯೆ

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 16 ಮಂದಿ ನಕ್ಸಲರು ಮೃತರಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್‌ ಠಾಣೆ ವ್ಯಾಪ್ತಿಯಲ್ಲಿ ಇರುವ ಅರಣ್ಯದೊಳಗೆ ಬೆಳಗಿನ ಜಾವ ಗುಂಡಿನ ಚಕಮಕಿ ನಡೆದಿದೆ.

ಕರ್ನಾಪಾಲ್‌ ಪ್ರದೇಶದಲ್ಲಿ ನಕ್ಸಲರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ 16 ಮಂದಿ ನಕ್ಸಲರು ಸಾವನ್ನಪ್ಪಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಈ ಹಿನ್ನೆಲೆಯಲ್ಲಿ ಛತ್ತೀಸ್‌ಗಢದ ರೈಲು ನಿಲ್ದಾಣಗಳು ಹಾಗೂ ಬಸ್‌ ನಿಲ್ದಾಣಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

7 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

8 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

8 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

8 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

8 hours ago