ಛತ್ತೀಸಗಢ: ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಇಂದು(ಆ.4) ನಡೆದ ಎನ್‌ಕೌಂಟರ್‌ನಲ್ಲಿ 30 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್‌ಮದ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಳಿಕ ನಕ್ಸಲರ ಮೃತದೇಹಗಳು ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸರು ತಿಳಿಸಿದ್ದಾರೆ.
ಕಾರ್ಯಚರಣೆ ಇನ್ನೂ ನಡೆಯುತ್ತಿದ್ದು, ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.
ಏಪ್ರಿಲ್ 16 ರಂದು ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು 29ಮಾವೋವಾದಿಗಳನ್ನು ಹತ್ಯೆ ಮಾಡಿದ ನಂತರ ಇದು ನಕ್ಸಲರ ವಿರುದ್ಧದ ಅತಿದೊಡ್ಡ ಎನ್‌ಕೌಂಟರ್ ಕಾರ್ಯಾಚರಣೆಯಾಗಿದೆ.