ಶ್ರೀನಗರ: ಕಥುವಾದ ಮಂಡ್ಲಿಯಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಎರಡನೇ ದಿನದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಉಗ್ರನೋರ್ವನನ್ನು ಗುಂಡಿಕ್ಕಿ ಕೊಂಡಿದ್ದು, ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರಿಸಲಾಗಿದೆ.
ಭಯೋತ್ಪಾದಕರು ಇರುವಿಕೆಯ ಮಾಹಿತಿ ದೊರೆತ ಮೇಲೆ ಭದ್ರತಾ ಪಡೆಗಳು ಹದ್ದಿನ ಕಣ್ಣಿಟ್ಟಿದ್ದು, ಅಂದಿನಿಂದಲೂ ಶೋಧಕಾರ್ಯ ಪ್ರಾರಂಭವಾಗಿದೆ.
ಕಥುವಾದಲ್ಲಿ ನಡೆಯುತ್ತಿರುವ ಶೋಧಕಾರ್ಯದಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.
ಈ ಸ್ಥಳಗಳಲ್ಲಿ ಮೂರ್ನಾಲ್ಕು ವಿದೇಶಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ದೊರೆತಿದೆ ಎನ್ನಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ. ಎನ್‌ಕೌಂಟರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಮೃತಪಟ್ಟಿದ್ದಾರೆ. ಜೊತೆಗೆ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.