ಜಮ್ಮು-ಕಾಶ್ಮೀರ: ಇಲ್ಲಿನ ಕುಲ್ಗಾಮ್ ಜಿಲ್ಲೆಯ ಗುಡ್ಡಾರ್ ಅರಣ್ಯ ಪ್ರದೇಶದಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದು, ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿರ್ದಿಷ್ಟು ಗುಪ್ತಚರ ಮಾಹಿತಿಯನ್ನು ನೀಡಿದ ನಂತರ ಕಾರ್ಯಾಚರಣೆ ಪ್ರಾರಂಭವಾಯಿತು. ಅದರ ನಂತರ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿ ಶೋಧವನ್ನು ಪ್ರಾರಂಭಿಸಿದವು.
ಎಚ್ಚರಿಕೆಯಿಂದ ಪಡೆಗಳು ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದವು. ಈ ವೇಳೆ ಭೀಕರ ಗುಂಡಿನ ಚಕಮಕಿ ನಡೆಯಿತು. ಈ ಸಮಯದಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು. ಘಟನೆಯಲ್ಲಿ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಪ್ರದೇಶದಲ್ಲಿ ಇನ್ನೂ ಎರಡರಿಂದ ಮೂರು ಭಯೋತ್ಪಾದಕರು ಅಡಗಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇದಕ್ಕಾಗಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದ್ದು, ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಹೇಳಿದ್ದಾರೆ.





