ದೇಶ- ವಿದೇಶ

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್:‌ ಓರ್ವ ಉಗ್ರನ ಹತ್ಯೆ

ಜಮ್ಮು-ಕಾಶ್ಮೀರ: ಇಲ್ಲಿನ ಕುಲ್ಗಾಮ್‌ ಜಿಲ್ಲೆಯ ಗುಡ್ಡಾರ್‌ ಅರಣ್ಯ ಪ್ರದೇಶದಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದು, ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿರ್ದಿಷ್ಟು ಗುಪ್ತಚರ ಮಾಹಿತಿಯನ್ನು ನೀಡಿದ ನಂತರ ಕಾರ್ಯಾಚರಣೆ ಪ್ರಾರಂಭವಾಯಿತು. ಅದರ ನಂತರ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸಿಆರ್‌ಪಿಎಫ್‌ ಜಂಟಿ ಶೋಧವನ್ನು ಪ್ರಾರಂಭಿಸಿದವು.

ಎಚ್ಚರಿಕೆಯಿಂದ ಪಡೆಗಳು ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದವು. ಈ ವೇಳೆ ಭೀಕರ ಗುಂಡಿನ ಚಕಮಕಿ ನಡೆಯಿತು. ಈ ಸಮಯದಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು. ಘಟನೆಯಲ್ಲಿ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಪ್ರದೇಶದಲ್ಲಿ ಇನ್ನೂ ಎರಡರಿಂದ ಮೂರು ಭಯೋತ್ಪಾದಕರು ಅಡಗಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇದಕ್ಕಾಗಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದ್ದು, ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago