ದೇಶ- ವಿದೇಶ

ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್:‌ 14 ನಕ್ಸಲರ ಹತ್ಯೆ

ಸುಕ್ಮಾ/ಬಿಜಾಪುರ: ಛತ್ತಿಸ್‍ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಪ್ರತ್ಯೇಕ ಎನ್‍ಕೌಂಟರ್‌ಗಳಲಿ ಕುಖ್ಯಾತ ಮಾವೋವಾದಿ ಮಾಂಗ್ಟು (ಮತ್ತು ಹಂಗಾ ಮಡ್ಕಮ್ ಸೇರಿದಂತೆ 14ಕ್ಕೂ ಹೆಚ್ಚು ನಕ್ಸಲರು ಸಾವನ್ನಪ್ಪಿದ್ದಾರೆ.

ಸುಕ್ಮಾದಲ್ಲಿ 12ಕ್ಕೂ ಹೆಚ್ಚು ನಕ್ಸಲರು ಹತರಾಗಿದ್ದಾರೆ ಮತ್ತು ಪಕ್ಕದ ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.‌

ಸುಕ್ಮಾ ಜಿಲ್ಲೆಯ ದಕ್ಷಿಣ ಪ್ರದೇಶದ ಕಾಡಿನಲ್ಲಿ ಭದ್ರತಾ ಪಡೆಯೊಂದಿಗೆ ನಡೆದ ಗುಂಡಿನ ಚಕಮಕಿ ನಡೆದಿದೆ. ಇದುವರೆಗೆ 12 ನಕ್ಸಲರನ್ನು ತಟಸ್ಥಗೊಳಿಸಲಾಗಿದೆ ಇದರಲ್ಲಿ ಮಾಂಗ್ಟು ಮತ್ತು ಹಂಗಾ ಮಡ್ಕಮ್ ಸೇರಿದ್ದಾರೆ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.

ಇನ್ನೊಂದು ಕಾರ್ಯಾಚರಣೆಯಲ್ಲಿ ಬಿಜಾಪುರ ಜಿಲ್ಲೆಯ ಕಾಡಿನಲ್ಲಿ ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಪಡೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ಇದೇ ರೀತಿ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಹೇಳಿದ್ದಾರೆ.

ಸ್ಥಳದಿಂದ ಒಂದು ಎಸ್ಎಲ್‍ಆರ್ ರೈಫಲ್ ಮತ್ತು ಒಂದು 12 ಬೋರ್ ರೈಫಲ್‍ ಮತ್ತು ಇಬ್ಬರು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

50 mins ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

52 mins ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

54 mins ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

56 mins ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

1 hour ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

1 hour ago