ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗಡಿ ನಿಯಂತ್ರಣ ರೇಖೆಯ ಬಳಿ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ವಿರುದ್ಧ ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಕಳೆದ ಒಂದು ತಿಂಗಳಿನಿಂದಲೂ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಅಟ್ಟಹಾಸ ಹೆಚ್ಚಾಗಿದ್ದು, ಹಲವು ಯೋಧರು ಸಾವನ್ನಪ್ಪಿದ್ದಾರೆ. ಜೊತೆಗೆ ಹಲವು ಭಯೋತ್ಪಾದಕರು ಕೂಡ ಗುಂಡಿನ ಚಕಮಕಿಯಲ್ಲಿ ಹತ್ಯೆ ಮಾಡಲಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರರನ್ನು ಮಟ್ಟಹಾಕಲು ಭಾರತೀಯ ಸೇನೆ ಹಾಗೂ ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.





