ನವದೆಹಲಿ: ದಾಖಲೆಗಳೊಂದಿಗೆ ತೆರೆ ಕಂಡ ಐತಿಹಾಸಿಕ ಮಹಾಕುಂಭಮೇಳವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಏಕತೆಯ ಮಹಾಕುಂಭವನ್ನು ಯಶಸ್ವಿಗೊಳಿಸಲು ದೇಶವಾಸಿಗಳ ಕಠಿಣ ಪರಿಶ್ರಮ, ಪ್ರಯತ್ನಗಳು ಮತ್ತು ದೃಢಸಂಕಲ್ಪದಿಂದ ಪ್ರಭಾವಿತನಾಗಿದ್ದೇನೆ. ಹೀಗಾಗಿ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಮೊದಲನೇಯ ಜ್ಯೋತಿರ್ಲಿಂಗವಾದ ಶ್ರೀ ಸೋಮನಾಥನ ದರ್ಶನಕ್ಕೆ ಹೋಗುತ್ತೇನೆ. ಭಕ್ತಿಯ ಸಂಕೇತವಾಗಿ ಸಂಕಲ್ಪ ಪುಷ್ಪವನ್ನು ಅರ್ಪಿಸುವ ಮೂಲಕ ಪ್ರತಿಯೊಬ್ಬ ಭಾರತೀಯನಿಗಾಗಿ ಪ್ರಾರ್ಥಿಸುತ್ತೇನೆ. ದೇಶವಾಸಿಗಳಲ್ಲಿ ಈ ಏಕತೆಯು ನಿರಂತರವಾಗಿ ಇರಲಿ ಎಂದು ನಾನು ಬಯಸುತ್ತೇನೆ ಎಂದಿದ್ದಾರೆ.
ಈ ಮಹಾಕುಂಭಮೇಳದಲ್ಲಿ ಸಮಾಜದ ಪ್ರತಿಯೊಂದು ಸ್ಥರದ ಮತ್ತು ಪ್ರತಿಯೊಂದಯ ಕ್ಷೇತ್ರದ ಜನರು ಒಟ್ಟುಗೂಡಿದರು. ಏಕ ಭಾರತ ಶ್ರೇಷ್ಠ ಭಾರತದ ಈ ಅವಿಸ್ಮರಣೀಯ ದೃಶ್ಯವು ಕೋಟ್ಯಾಂತರ ದೇಶವಾಸಿಗಳಲ್ಲಿ ಆತ್ಮವಿಶ್ವಾಸದ ಮಹಾ ಹಬ್ಬವಾಯಿತು ಎಂದು ಪ್ರಧಾನಿ ಮೋದಿ ಕೊಂಡಾಡಿದ್ದಾರೆ.
ಇನ್ನು ಮಹಾಕುಂಭಮೇಳ ಮುಗಿದ ನಂತರ ನನ್ನ ಮನಸ್ಸಿಗೆ ಬಂದ ಆಲೋಚನೆಗಳನ್ನು ಬರೆಯಲು ಪ್ರಯತ್ನಿಸಿದ್ದೇನೆ ಎಂದು ತಿಳಿಸಿದ್ದಾರೆ.
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…