Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ದಿಲ್ಲಿ-ಗೋವಾ ಇಂಡಿಗೋ ವಿಮಾನದಲ್ಲಿ ಎಂಜಿನ್ ವೈಫಲ್ಯ : ಮುಂಬೈನಲ್ಲಿ ತುರ್ತು ಭೂಸ್ಪರ್ಶ

engine fail in delhi to goa flight

ಮುಂಬೈ : ದಿಲ್ಲಿಯಿಂದ ಗೋವಾಕ್ಕೆ ಹೊರಟಿದ್ದ ಇಂಡಿಗೋ ವಿಮಾನವು ಎಂಜಿನ್ ವೈಫಲ್ಯದಿಂದಾಗಿ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏರ್‌ಬಸ್ ಎ೩೨೦ ನಿಯೋ ವಿಮಾನ ಬುಧವಾರ ರಾತ್ರಿ ೯.೫೨ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ದೋಷದಿಂದಾಗಿ ವಿಮಾನವನ್ನು ಮುಂಬೈನಲ್ಲಿ ತುರ್ತು ಭೂಸ್ಪರ್ಶಗೊಳಿಸಲಾಯಿತು ಬಳಿಕ ಪೂರ್ಣ ಪ್ರಮಾಣದ ತುರ್ತು ಪರಿಸ್ಥಿತಿ ಘೋಷಿಸಲಾಯಿತು ಎಂದು ಇಂಡಿಗೋ ಸಂಸ್ಥೆ ತನ್ನ ಹೇಳಿಕೆಯಲ್ಲಿ ಹೇಳಿದೆ.

ಜುಲೈ ೧೬ರಂದು ದಿಲ್ಲಿಯಿಂದ ಗೋವಾದ ಮನೋಹರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಾಟ ನಡೆಸುತ್ತಿದ್ದ ೬ಇ ೬೨೭೧ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಹೀಗಾಗಿ, ವಿಮಾನವನ್ನು ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಲಾಯಿತು. ವಿಮಾನವು ಅಗತ್ಯ ತಪಾಸಣೆ ಮತ್ತು ನಿರ್ವಹಣೆಗೆ ಒಳಪಡಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಯಿತು ಎಂದು ಇಂಡಿಗೋ ವಕ್ತಾರರು ತಿಳಿಸಿದ್ದಾರೆ. ಆದರೆ ವಿಮಾನದಲ್ಲಿದ್ದ ಪ್ರಯಾಣಿಕರ ಸಂಖ್ಯೆ ಬಗ್ಗೆ ವಿಮಾನಯಾನ ಸಂಸ್ಥೆ ಮಾಹಿತಿ ನೀಡಿಲ್ಲ.

Tags:
error: Content is protected !!