engine fail in delhi to goa flight
ಮುಂಬೈ : ದಿಲ್ಲಿಯಿಂದ ಗೋವಾಕ್ಕೆ ಹೊರಟಿದ್ದ ಇಂಡಿಗೋ ವಿಮಾನವು ಎಂಜಿನ್ ವೈಫಲ್ಯದಿಂದಾಗಿ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏರ್‌ಬಸ್ ಎ೩೨೦ ನಿಯೋ ವಿಮಾನ ಬುಧವಾರ ರಾತ್ರಿ ೯.೫೨ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ದೋಷದಿಂದಾಗಿ ವಿಮಾನವನ್ನು ಮುಂಬೈನಲ್ಲಿ ತುರ್ತು ಭೂಸ್ಪರ್ಶಗೊಳಿಸಲಾಯಿತು ಬಳಿಕ ಪೂರ್ಣ ಪ್ರಮಾಣದ ತುರ್ತು ಪರಿಸ್ಥಿತಿ ಘೋಷಿಸಲಾಯಿತು ಎಂದು ಇಂಡಿಗೋ ಸಂಸ್ಥೆ ತನ್ನ ಹೇಳಿಕೆಯಲ್ಲಿ ಹೇಳಿದೆ.
ಜುಲೈ ೧೬ರಂದು ದಿಲ್ಲಿಯಿಂದ ಗೋವಾದ ಮನೋಹರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಾಟ ನಡೆಸುತ್ತಿದ್ದ ೬ಇ ೬೨೭೧ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಹೀಗಾಗಿ, ವಿಮಾನವನ್ನು ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಲಾಯಿತು. ವಿಮಾನವು ಅಗತ್ಯ ತಪಾಸಣೆ ಮತ್ತು ನಿರ್ವಹಣೆಗೆ ಒಳಪಡಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಯಿತು ಎಂದು ಇಂಡಿಗೋ ವಕ್ತಾರರು ತಿಳಿಸಿದ್ದಾರೆ. ಆದರೆ ವಿಮಾನದಲ್ಲಿದ್ದ ಪ್ರಯಾಣಿಕರ ಸಂಖ್ಯೆ ಬಗ್ಗೆ ವಿಮಾನಯಾನ ಸಂಸ್ಥೆ ಮಾಹಿತಿ ನೀಡಿಲ್ಲ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…